ಕಾಸರಗೋಡು: ಸಂಚರಿಸುತ್ತಿದ್ದ ಲಾರಿ ಬೆಂಕಿಗಾಹುತಿ
Thursday, June 9, 2022
ಕಾಸರಗೋಡು: ಸಂಚರಿಸುತ್ತಿದ್ದ ಲಾರಿಯೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಅಗ್ನಿಗಾಹುತಿಯಾಗಿರುವ ಘಟನೆ ಇಂದು ಮಧ್ಯಾಹ್ನ ಪೆರ್ಲ ಸಮೀಪದ ನಲ್ಕ ಎಂಬಲ್ಲಿ ನಡೆದಿದೆ.
ಜಲ್ಲಿ ತುಂಬಿಸಿಕೊಂಡು ವಿಟ್ಲದಿಂದ ಲಾರಿಯು ಬದಿಯಡ್ಕದೆಡೆಗೆ ಹೋಗುತ್ತಿತ್ತು. ಈ ವೇಳೆ ಲಾರಿಯಲ್ಲಿ ಹೊಗೆ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಚಾಲಕ ಲಾರಿಯನ್ನು ನಿಲ್ಲಿಸಿದ್ದಾರೆ. ಆದರೆ ಕ್ಷಣಾರ್ಧದಲ್ಲೇ ಲಾರಿ ಪೂರ್ತಿ ಬೆಂಕಿ ಕಾಣಿಸಿಕೊಂಡಿದೆ.
ಲಾರಿಯಲ್ಲಿದ್ದವರು ಪಾರಾಗಿದ್ದಾರೆ. ತಕ್ಷಣ ಸ್ಥಳೀಯರು ಬೆಂಕಿ ನಂದಿಸಲು ಯತ್ನಿಸಿದ್ದಾರೆ. ಸ್ಥಳಕ್ಕೆ ದೌಢಾಯಿಸಿದ ಅಗ್ನಿಶಾಮಕ ದಳ ಹೆಚ್ಚಿನ ಅನಾಹುತವನ್ನು ತಪ್ಪಿಸಿದೆ.