ಬೆಳ್ತಂಗಡಿ: ಗಾಂಜಾ ಸಾಗಾಟದ ಆರೋಪಿಗಳು ವಶಕ್ಕೆ
Sunday, June 5, 2022
ಮಂಗಳೂರು: ದ್ವಿಚಕ್ರ ವಾಹನದಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಕುವೆಟ್ಟು ಗ್ರಾಮದ ಗುರುವಾಯನಕೆರೆ ಎಂಬಲ್ಲಿ ಬಂಧಿಸಿ, ಗಾಂಜಾವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ತೌಫೀಕ್ ಮತ್ತು ರಫೀಕ್ ಎಂಬವರು ಬಂಧಿತ ಆರೋಪಿಗಳು. ಇವರಿಂದ 41.530 ಗ್ರಾಂ ಗಾಂಜಾವನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.
ಅಬಕಾರಿ ಇಲಾಖೆಯ ಅಧಿಕಾರಿಗಳು ಕರ್ತವ್ಯದಲ್ಲಿದ್ದ ಸಂದರ್ಭದಲ್ಲಿ ಪ್ರಕರಣ ಬೆಳಕಿಗೆ ಬಂದಿದೆ. ಅಬಕಾರಿ ಉಪನಿರೀಕ್ಷಕ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ. ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.