ಪುತ್ತೂರು: ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತನ ಕೊಲೆ ಆರೋಪಿಯ ಬರ್ಬರವಾಗಿ ಹತ್ಯೆ
Saturday, June 4, 2022
ಪುತ್ತೂರು: ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತ ಕಾರ್ತಿಕ್ ಮೇರ್ಲನ ಹತ್ಯೆಯ ಪ್ರಮುಖ ಆರೋಪಿಯನ್ನು ಪೆರ್ಲಂಪಾಡಿ ಬಳಿ ಶನಿವಾರ ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಆರ್ಯಾಪು ನಿವಾಸಿ ಚರಣ್ ರಾಜ್ ರೈ(28) ಹತ್ಯೆಯಾದವನು.
ಮೂರು ವರ್ಷಗಳ ಹಿಂದೆ ಅಂದರೆ 2019 ಸೆ.3ರಂದು ರಾತ್ರಿ ಸಂಪ್ಯದ ಸಾರ್ವಜನಿಕ ಶ್ರೀ ಗಣೇಶೋತ್ಸವದ ದಿನ ಸಂಪ್ಯದಲ್ಲಿರುವ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಮುಂಭಾಗದಲ್ಲಿಯೇ ಕಾರ್ತಿಕ್ ಮೇರ್ಲನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚರಣ್ ರಾಜ್ ರೈ, ಕಿರಣ್ ರೈ, ಪ್ರೀತೇಶ್ ಶೆಟ್ಟಿ ಎಂಬವರನ್ನು ಬಂಧಿಸಲಾಗಿತ್ತು.
ಹತ್ಯೆ ಮಾಡಿರುವ ಆರೋಪಿಗಳಲ್ಲಿ ಚರಣ್ ರಾಜ್ ಪ್ರಮುಖ ಆರೋಪಿಯಾಗಿದ್ದ. ನಾಳೆ ಪೆರ್ಲಂಪಾಡಿಯಲ್ಲಿ ಈತನ ಮೆಡಿಕಲ್ ಶಾಪ್ ಆರಂಭಗೊಳ್ಳಲಿತ್ತು. ಈ ಹಿನ್ನೆಲೆಯಲ್ಲಿ ಪೂರ್ವ ತಯಾರಿ ನಡೆಯುತ್ತಿತ್ತು. ಇದೇ ವೇಳೆ ದ್ವಿಚಕ್ರ ವಾಹನದಲ್ಲಿ ಬಂದ ದುಷ್ಕರ್ಮಿಗಳು ತಲವಾರಿನಲ್ಲಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ.