-->
ಆನ್ಲೈನ್ ಲೂಡೋಗೇಮ್ ವಿಚಾರದಲ್ಲಿ ನಡೆದ ಜಗಳ ಪ್ರತಿಭಾನ್ವಿತ ವಿದ್ಯಾರ್ಥಿಯ ಕೊಲೆಯಲ್ಲಿ ಅಂತ್ಯ

ಆನ್ಲೈನ್ ಲೂಡೋಗೇಮ್ ವಿಚಾರದಲ್ಲಿ ನಡೆದ ಜಗಳ ಪ್ರತಿಭಾನ್ವಿತ ವಿದ್ಯಾರ್ಥಿಯ ಕೊಲೆಯಲ್ಲಿ ಅಂತ್ಯ

ಕಲಬುರಗಿ: ಆನ್‌ಲೈನ್ ಲೂಡೋ ಗೇಮ್​ ವಿಚಾರದಲ್ಲಿ ಪ್ರಾರಂಭಗೊಂಡ ಜಗಳವೊಂದು ಪ್ರತಿಭಾನ್ವಿತ ವಿದ್ಯಾರ್ಥಿ ಎದೆಗೆ ಚಾಕು ಇರಿದು ಬರ್ಬರವಾಗಿ ಕೊಲೆಯಲ್ಲಿ ಅಂತ್ಯಗೊಂಡಿದೆ. ಈ ಘಟನೆ ಅಫಜಲಪುರ ತಾಲೂಕಿನ ಮಾಶಾಳ ಗ್ರಾಮದಲ್ಲಿ ನಡೆದಿದ್ದು, ಈತನ ಸ್ನೇಹಿತರೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.ಪ್ರಕರಣಕ್ಕೆ‌ ಸಂಬಂಧಿಸಿದಂತೆ ಈಗಾಗಲೇ ಮೂವರನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಶಾಮರಾಯ ಪರೀಟ್ (16) ಕೊಲೆಯಾದ ವಿದ್ಯಾರ್ಥಿ. 

ಶಾಮರಾಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದ. ಕಳೆದ ಒಂದು ತಿಂಗಳು ಈತ ಲೂಡೋ ಗೇಮ್ ಎಂಬ ಕ್ಷುಲ್ಲಕ ಕಾರಣಕ್ಕೆ ಸಚಿನ್ ಕಿರಸಾವಳಗಿ (22) ಎಂಬುವನ ಜೊತೆ ಕಿರಿಕ್ ಮಾಡಿಕೊಂಡಿದ್ದ ಎನ್ನಲಾಗಿದೆ. ನಿನ್ನೆ ರಾತ್ರಿ ಶಾಮರಾಯ ಹಾಗೂ ಸಚಿನ್ ನಡುವೆ ಮತ್ತೆ ಗಲಾಟೆ ನಡೆದಿದೆ. ಈ ವೇಳೆ‌‌, ಮಧ್ಯ ಪ್ರವೇಶಿರುವ ಶಾಮರಾಯನ ಹಿರಿಯ ಸಹೋದರ ಧರ್ಮರಾಜ, ಇಬ್ಬರಿಗೂ ಕಪಾಳಕ್ಕೆ ಬಾರಿಸಿ ಸಮಾಧಾನಪಡಿಸಿ ಮನೆಗೆ ಕಳುಹಿಸಿದ್ದಾನೆ. ಆದರೆ ಸ್ಪಲ್ಪ ಸಮಯದಲ್ಲಿ ಚಾಕು ಹಿಡಿದುಕೊಂಡು ಬಂದ ಸಚಿನ್, ಶಾಮರಾಯನ ಎದೆಗೆ ಚುಚ್ಚಿ‌ದ್ದಾನೆ ಎನ್ನಲಾಗಿದೆ. ಪರಿಣಾಮ ತೀವ್ರ ರಕ್ತಸ್ರಾವದಿಂದ ಶಾಮರಾಯ ಮೃತಪಟ್ಟಿದ್ದಾನೆ ಎಂದು ಮೃತನ ಸಹೋದರ ಧರ್ಮರಾಜ ತಿಳಿಸಿದ್ದಾರೆ.

ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾಲಕನ‌ ಕುಟುಂಬಸ್ಥರ ಅಕ್ರಂದ‌ನ ಮುಗಿಲು ಮುಟ್ಟಿದ್ದು, ಇಡೀ ಗ್ರಾಮವೇ ಶೋಕ ಸಾಗರದಲ್ಲಿ ಮುಳುಗಿದೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಅಫಜಲಪುರ ಪೊಲೀಸರು, ತನಿಖೆ ಆರಂಭಿಸಿದ್ದಾರೆ.

Ads on article

Advertise in articles 1

advertising articles 2

Advertise under the article