PUC FAIL : ನಾಲ್ವರು ವಿದ್ಯಾರ್ಥಿನಿಯರು ಆತ್ಮಹತ್ಯೆ
Saturday, June 18, 2022
ಮಡಿಕೇರಿಯ ಕುಶಾಲನಗರ ನಿವಾಸಿ ಸಂಧ್ಯಾ ಕುಶಾಲನಗರದ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು. ಪರೀಕ್ಷೆ ಬರೆದಿದ್ದ ಆಕೆ ಫಲಿತಾಂಶದ ನಿರೀಕ್ಷೆಯಲ್ಲಿದ್ದಳು. ಆದರೆ ರಿಸಲ್ಟ್ ಏನಾಗುತ್ತೋ ಎಂಬ ಆತಂಕದಲ್ಲಿ ಫಲಿತಾಂಶ ಬರುವ ಮುನ್ನವೇ ನೇಣಿಗೆ ಶರಣಾಗಿದ್ದಾಳೆ. ಆದರೆ ವಿಪರ್ಯಾಸವೆಂದರೆ 67 ಶೇಕಡಾ ಅಂಕ ಗಳಿಸಿದ್ದಾಳೆ.
ಗದಗ ಜಿಲ್ಲೆಯ ಹರ್ತಿ ಗ್ರಾಮದ ವಿದ್ಯಾರ್ಥಿನಿ ಪವಿತ್ರಾ ಪ್ರಭುಗೌಡ ಲಿಂಗಧಾಳ ತನ್ನ ರಿಸಲ್ಟ್ ನೋಡಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆಕೆ ನಗರದ ಸನ್ಮಾರ್ಗ ಪದವಿ ಪೂರ್ವ ಕಾಲೇಜಿನಲ್ಲಿ ವಿಜ್ಞಾನ ವಿಷಯದಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಈಕೆ ಕನ್ನಡ, ಇಂಗ್ಲೀಷ್ ಭಾಷಾ ವಿಷಯಗಳನ್ನು ಹೊರತುಪಡಿಸಿ ಗಣಿತ, ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಜೀವಶಾಸ್ತ್ರ ವಿಷಯದಲ್ಲಿ ಅನುತ್ತೀರ್ಣಳಾಗಿದ್ದಳು. ಇದರಿಂದ ಮನನೊಂದ ವಿದ್ಯಾರ್ಥಿನಿ ಲಿಂಗಧಾಳ ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಇದನ್ನು ಪೋಷಕರು ಗಮನಿಸಿ ಆಕೆಯನ್ನು ಗದಗ ಜಿಮ್ಸ್ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ದಾರಿ ಮಧ್ಯೆಯೇ ಆಕೆ ಮೃತಪಟ್ಟಿದ್ದಾಳೆ.
ಮಂಡ್ಯದ ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ಎಂ.ಜೆ.ಸ್ಪoದನಾ ಪಿಯುಸಿಯಲ್ಲಿ ಫೇಲ್ ಆಗಿರೋದಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ಮತ್ತೋರ್ವ ವಿದ್ಯಾರ್ಥಿನಿ. ಈಕೆ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ್ದಳು. ಬಳಿಕ ಮಂಡ್ಯ ಖಾಸಗಿ ಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು. ಆದರೆ ಇಂದು ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಆದರೆ ತಾನು ಮೂರು ವಿಷಯಗಳಲ್ಲಿ ಅನುತ್ತೀರ್ಣರಾಗಿವುದನ್ನು ಗಮನಿಸಿದ ಆಕೆ ಮನನೊಂದು ಮನೆಯಲ್ಲಿಯೇ ನೇಣಿಗೆ ಶರಣಾಗಿದ್ದಾಳೆ ಎಂದು ತಿಳಿದು ಬಂದಿದೆ.
ಬಾಗಲಕೋಟೆ ಜಿಲ್ಲೆಯ ಬಿಳಗಿ ತಾಲೂಕಿನ ಯಡಹಳ್ಳಿಯ ವಿದ್ಯಾರ್ಥಿನಿ ಪೂಜಾ ರಾಚಪ್ಪ
ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈಕೆ ಶನಿವಾರ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಾಗ ತಾನು ಫೇಲ್ ಆಗಿರುವುದು ಆಕೆಗೆ ತಿಳಿದು ಬಂದಿದೆ. ಪರಿಣಾಮ ಆಕೆ ಮನನೊಂದು ಯಡಹಳ್ಳಿ ಗ್ರಾಮದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.