
ಉಳ್ಳಾಲ: ಮನೆಯಲ್ಲಿ ಆರ್ಥಿಕ ಸಂಕಷ್ಟ; ಮನನೊಂದು ಬಿಬಿಎ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು!
Friday, June 17, 2022
ಉಳ್ಳಾಲ: ಮನೆಯಲ್ಲಿ ಆರ್ಥಿಕ ಸಂಕಷ್ಟ ತಲೆದೋರಿದ್ದ ಹಿನ್ನೆಲೆಯಲ್ಲಿ ಮನನೊಂದ ಬಿಬಿಎ ವಿದ್ಯಾರ್ಥಿಯೋರ್ವನು ಆತ್ಮಹತ್ಯೆಗೈದ ಶರಣಾಗಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಬಗಂಬಿಲದಲ್ಲಿ ನಡೆದಿದೆ.
ನಗರದ ಶ್ರೀದೇವಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಬಿಬಿಎ ವ್ಯಾಸಂಗ ಮಾಡುತ್ತಿದ್ದ ಹರ್ದೀಪ್ (20)ಮೃತಪಟ್ಟ ವಿದ್ಯಾರ್ಥಿ.
ಹರ್ದೀಪ್ ಗುರುವಾರ ಸಂಜೆ ಬಗಂಬಿಲದಲ್ಲಿನ ಮನೆಯ ಕೋಣೆಯಲ್ಲಿ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈತನ ಕುಟುಂಬವು ಆರ್ಥಿಕ ಸಮಸ್ಯೆಯಲ್ಲಿತ್ತು. ಆದ್ದರಿಂದ ಖಿನ್ನತೆಗೊಳಗಾಗಿದ್ದ ಹರ್ದೀಪ್ ಆತ್ಮಹತ್ಯೆಗೈದಿರುವುದಾಗಿ ಹೇಳಲಾಗುತ್ತಿದೆ.
ಮೃತನ ತಾಯಿ ನೀಡಿರುವ ದೂರಿನಂತೆ ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿದ್ದು ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಿ ಪೋಷಕರಿಗೆ ಒಪ್ಪಿಸಿದ್ದಾರೆ.