ಬೆಂಗಳೂರು: ಪ್ರೇಯಸಿ ಮದುವೆಯಾಗಲು ನಿರಾಕರಿಸಿದ್ದಕ್ಕೆ ಮನನೊಂದ ಪ್ರಿಯಕರ ಆತ್ಮಹತ್ಯೆ
Tuesday, June 7, 2022
ಬೆಂಗಳೂರು: ಪ್ರೇಯಸಿ ಮದುವೆಯಾಗೋಲ್ಲವೆಂದು ಬ್ರೇಕಪ್ ಮಾಡಿಕೊಂಡಿರೋದರಿಂದ ಮನನೊಂದ ಪ್ರಿಯಕರ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿದ್ಯಾರಣ್ಯಪುರದ ಚಾಮುಂಡೇಶ್ವರಿ ಲೇಔಟ್ ನಲ್ಲಿ ನಡೆದಿದೆ.
ಚಾಮುಂಡೇಶ್ವರಿ ಲೇಔಟ್ ನಿವಾಸಿ ಚರಣ್(25) ಆತ್ಮಹತ್ಯೆ ಮಾಡಿಕೊಂಡ ಯುವಕ.
ಚರಣ್ ಯುವತಿಯೋರ್ವಳನ್ನು ಕಳೆದ ಐದು ವರ್ಷಗಳಿಂದ ಪ್ರೀತಿಸುತ್ತಿದ್ದ. ಆದ್ದರಿಂದ ಮದುವೆಯಾಗುವುದಾಗಿ ನಿರ್ಧರಿಸಿ ಧರ್ಮಸ್ಥಳಕ್ಕೆ ಹೋಗಿದ್ದರು. ಆದರೆ ಕೊನೆಯ ಕ್ಷಣದಲ್ಲಿ ಯುವತಿ ಆತನನ್ನು ಮದುವೆಯಾಗಲು ನಿರಾಕರಿಸಿದ್ದಾಳೆ. ಇದರಿಂದ ಮನನೊಂದ ಚರಣ್ ತನ್ನ ಮನೆಯಲ್ಲಿ ನೇಣಿಗೆ ಶರಣಾಗಿದ್ದಾನೆ. ಈ ಬಗ್ಗೆ ವಿದ್ಯಾರಣ್ಯಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.