ಹೊಸೂರು: ಲಾರಿ ಚಾಲಕನ ಅಜಾಗರೂಕತೆಯಿಂದ ದ್ವಿಚಕ್ರದಲ್ಲಿ ಪ್ರಯಾಣಿಸುತ್ತಿದ್ದ ದಂಪತಿ ಮೃತ್ಯು, ಹಸುಗೂಸು ಪಾರು
Saturday, July 9, 2022
ಹೊಸೂರು: ದ್ವಿಚಕ್ರ ವಾಹನಕ್ಕೆ ಲಾರಿಡಿಕ್ಕಿಯಾಗಿ ದಂಪತಿ ಮೃತಪಟ್ಟು ನಾಲ್ಕು ತಿಂಗಳ ಹಸುಗೂಸೊಂದು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಘಟನೆ ರಾಜ್ಯದ ಗಡಿಭಾಗ ತಮಿಳುನಾಡಿನ ಹೊಸೂರಿನಲ್ಲಿ ನಡೆದಿದೆ.
ಅನ್ಬು ಹಾಗೂ ಸರಿತಾ ಅಪಘಾತದಲ್ಲಿ ಮೃತಪಟ್ಟ ದಂಪತಿ.
ಹೆದ್ದಾರಿಯಲ್ಲಿ ಏಕಾಏಕಿ ಯುಟರ್ನ್ ತೆಗೆದುಕೊಳ್ಳಲು ಮುಂದಾದ ಟ್ಯಾಂಕರ್ ಚಾಲಕ ದ್ವಿಚಕ್ರ ವಾಹನ ಬರುತ್ತಿರುವುದನ್ನೂ ಲೆಕ್ಕಿಸದೆ ಡಿಕ್ಕಿ ಹೊಡೆದ ಪರಿಣಾಮ ಈ ಅನಾಹುತ ಸಂಭವಿಸಿದೆ. ಆದ್ದರಿಂದ ಲಾರಿ ಚಾಲಕನ ಅಜಾಗರೂಕತೆಯಿಂದಾಗಿ ಈ ಅಪಘಾತ ನಡೆದಿದೆ ಎನ್ನಲಾಗಿದೆ. ಅಪಘಾತದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
4 ತಿಂಗಳ ಹಸುಗೂಸಿಕೊಂದಿಗೆ ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ದಂಪತಿ ಮೃತಪಟ್ಟಿದ್ದಾರೆ. ಸಣ್ಣ ಪುಟ್ಟ ಗಾಯಗಳಾಗಿದ್ದ ಮಗುವನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.