-->
ಕಾರ್ಕಳ: ಭೀಕರ ರಸ್ತೆ ಅಪಘಾತಕ್ಕೆ ಸಹೋದರರು ಬಲಿ

ಕಾರ್ಕಳ: ಭೀಕರ ರಸ್ತೆ ಅಪಘಾತಕ್ಕೆ ಸಹೋದರರು ಬಲಿ

ಕಾರ್ಕಳ: ತಾಲೂಕಿನ ಬೆಳ್ಮಣ್ ಸಮೀಪದ ನಂದಳಿಕೆ ಮಾವಿನಕಟ್ಟೆ ಎಂಬಲ್ಲಿ ನಡೆದಿರುವ ಕಾರು ಹಾಗೂ ಬೈಕ್ ನಡುವೆ ಅಪಘಾತಕ್ಕೆ ಸಹೋದರರಿಬ್ಬರು ಬಲಿಯಾದ ದುರ್ಘಟನೆ ನಡೆದಿದೆ.

ಸತೀಶ್ ಹಾಗೂ ಸಂದೀಪ್ ಮೃತಪಟ್ಟ ಸಹೋದರರು.


 ಸತೀಶ್ ಹಾಗೂ ಸಂದೀಪ್ ನಿಟ್ಟೆಯಿಂದ ನಂದಳಿಕೆ ಕಡೆಗೆ ಬೈಕ್ ನಲ್ಲಿ ಬರುತ್ತಿದ್ದರು. ಈ ವೇಳೆ ಪಡುಬಿದ್ರೆ ಕಡೆಯಿಂದ ವೇಗವಾಗಿ ಬರುತ್ತಿದ್ದ ಇನ್ನೋವಾ ಕಾರು ಮುಂಭಾಗದಿಂದ ಬೈಕ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಓರ್ವ ಸ್ಥಳದಲ್ಲಿಯೇ ಮೃತಪಟ್ಟರೆ, ಮತ್ತೋರ್ವ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ads on article

Advertise in articles 1

advertising articles 2

Advertise under the article