ಮಂಗಳೂರು: ಕಾಲೇಜು ವಿದ್ಯಾರ್ಥಿಗಳ ಕಿಸ್ಸಿಂಗ್, ಅನುಚಿತ ವರ್ತನೆ ಪ್ರಕರಣ; ಮತ್ತೋರ್ವ ವಿದ್ಯಾರ್ಥಿ ವಶಕ್ಕೆ
Saturday, July 23, 2022
ಮಂಗಳೂರು: ನಗರದ ಕಾಲೇಜೊಂದರ ವಿದ್ಯಾರ್ಥಿಗಳ ಕಿಸ್ಸಿಂಗ್ ಹಾಗೂ ಅನುಚಿತ ವರ್ತನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ನಗರ ಪೊಲೀಸರು ಈವರೆಗೆ ನಾಲ್ವರನ್ನು ವಶಕ್ಕೆ ಪಡೆದುಕೊಂಡಿದ್ದರು. ನಿನ್ನೆ ಮತ್ತೋರ್ವನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಐವರು ವಿದ್ಯಾರ್ಥಿಗಳನ್ನು ವಿಚಾರಣೆ ನಡೆಸುದಂತಾಗಿದೆ.
ಮಂಗಳೂರಿನ ಬಾವುಟಗುಡ್ಡದ ಕಾಲೇಜೊಂದರ ವಿದ್ಯಾರ್ಥಿಗಳು ವಿದ್ಯಾರ್ಥಿನಿಯರನ್ನು ತಾವು ವಾಸವಿದ್ದ ರೂಂಗೆ ಕರೆಸಿಕೊಂಡು ಟ್ರುತ್ ಅಂಡ್ ಡೇರ್ ಗೇಮ್ ಆಡಿ ವಿದ್ಯಾರ್ಥಿನಿಯರ ಜೊತೆಗೆ ಕಿಸ್ಸಿಂಗ್ ಮಾಡಿ ಅನುಚಿತವಾಗಿ ವರ್ತಿಸಿದ್ದರು. ಇದರ ವಿಡಿಯೋ ಮೊನ್ನೆ ವೈರಲ್ ಆಗಿತ್ತು. ಈ ಬಗ್ಗೆ ಮಂಗಳೂರು ನಗರ ಪೊಲೀಸರು ಮೂರು ಪ್ರತ್ಯೇಕ ಪೋಕ್ಸೋ ಪ್ರಕರಣ ದಾಖಲಿಸಿದ್ದರು.
ಪ್ರಕರಣದಲ್ಲಿ ಈಗಾಗಲೇ 8ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಇದೀಗ ಈ ಸಂಬಂಧ ಐವರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ಅವರನ್ನು ಬಾಲ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ಈ ಬಗ್ಗೆ ವಿಚಾರಣೆ ನಡೆಸಿದ ಬಾಲ ನ್ಯಾಯಾಲಯವು ವಿದ್ಯಾರ್ಥಿಗಳನ್ನು ಹೆತ್ತವರ ಕಸ್ಟಡಿಗೆ ನೀಡಿದ್ದು, ಅಗತ್ಯ ಬಿದ್ದಾಗ ತನಿಖಾಧಿಕಾರಿ ಮುಂದೆ ಹಾಜರಾಗಲು ಸೂಚಿಸಿದೆ.