![ಪಡುಬಿದ್ರೆ: ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ ಅರೆಸ್ಟ್ ಪಡುಬಿದ್ರೆ: ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ ಅರೆಸ್ಟ್](https://blogger.googleusercontent.com/img/b/R29vZ2xl/AVvXsEigP5DmbZY7xJt1XSwc0gYPdxdAB8Th1hyhDJu60iBWaC6pd8_Rq6gjH1wj4bmi3fyyq6_deCC58ub7vZV7tYkgBBgeTpM9O3Nq__9qYd3LWOlKU-OSuNCCmMojx4y2i-H3rIVyVHgW8RAq/s1600/1658971320541717-0.png)
ಪಡುಬಿದ್ರೆ: ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ ಅರೆಸ್ಟ್
Thursday, July 28, 2022
ಪಡುಬಿದ್ರೆ: ಅಪ್ರಾಪ್ತ ವಯಸ್ಕ ಕಾಲೇಜು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಮೇಲೆ ಕಾಮುಕ ಯುವಕನೋರ್ವನನ್ನು ಪಡುಬಿದ್ರೆ ಪೊಲೀಸರು ಬಂಧಿಸಿ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.
ಹೆಜಮಾಡಿ ಆಲಡೆ ಬಳಿಯ ನಿವಾಸಿ ಯಾಸಿನ್ (19) ಬಂಧಿತ ಕಾಮುಕ. ಈತನಿಗೆ ಈ ಕೃತ್ಯಕ್ಕೆ ಸಹಕರಿಸಿರುವ ಆರೋಪದಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕನನ್ನು ವಶಪಡಿಸಿಕೊಂಡು ಬಾಲಮಂದಿರಕ್ಕೆ ಸೇರಿಸಲಾಗಿದೆ.
ಕಾಮುಕ ಯಾಸಿನ್ ಸಂತ್ರಸ್ತ ಕಾಲೇಜು ವಿದ್ಯಾರ್ಥಿನಿಯನ್ನು ಹೆಜಮಾಡಿ ಆಲಡೆ ಬಳಿಯ ಅಪಾರ್ಟ್‌ಮೆಂಟ್ ಒಂದರ ಟೆರೇಸ್‌ಗೆ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಪೊಲೀಸ್ ದೂರು ನೀಡಲಾಗಿದೆ. ಅದರಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಅಲ್ಲದೆ ಕೃತ್ಯಕ್ಕೆ ಬಳಸಿರುವ ಆಟೋ ರಿಕ್ಷಾವನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.