ದ.ಕ.ಜಿಲ್ಲೆಯಲ್ಲಿ ನಾಳೆ ( ಜುಲೈ12) ಶಾಲೆಗೆ ರಜೆ ಇಲ್ಲ!
Monday, July 11, 2022
ಮಂಗಳೂರು: ದ.ಕ.ಜಿಲ್ಲೆಯಲ್ಲಿ ನಾಳೆ ( ಜುಲೈ 12) ಆರೆಂಜ್ ಅಲರ್ಟ್ ಇರೋದರಿಂದ ನಾಳೆ ಶಾಲೆಗೆ ರಜೆ ಇರುವುದಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಅಂಗನವಾಡಿ ಮಕ್ಕಳಿಂದ ಎಲ್ಲಾ ಪ್ರಾಥಮಿಕ, ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಎಂದಿನಂತೆ ತರಗತಿಗಳು ನಡೆಯಲಿವೆ ಎಂದು ಅವರು ತಿಳಿಸಿದ್ದಾರೆ.
ಯಾವುದಾದರೂ ತೊಂದರೆಗಳಿದ್ದಲ್ಲಿ ಸ್ಥಳೀಯ ಶಾಲೆಗಳಲ್ಲಿ ನಿರ್ಧಾರ ಕೈಗೊಳ್ಳಲು ಡಿಡಿಪಿಐ ಅವರಿಗೆ ಅವಕಾಶ ನೀಡಲಾಗಿದೆ ಎಂದು ದ.ಕ.ಜಿಲ್ಲಾಧಿಕಾರಿಯವರ ಪ್ರಕಟಣೆಯಲ್ಲಿ ತಿಳಿಸಲಾಗಿದೆ.