ಮಹಿಳಾ, ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಕಾರ್ಯಕ್ರಮ ಸಹಾಯಕರ ನೇಮಕ: ಅರ್ಜಿ ಆಹ್ವಾನ
ಮಹಿಳಾ, ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಕಾರ್ಯಕ್ರಮ ಸಹಾಯಕರ ನೇಮಕ: ಅರ್ಜಿ ಆಹ್ವಾನ
Karnataka WCD Recruitment 2022: ಕರ್ನಾಟಕ ರಾಜ್ಯ ಸರ್ಕಾರ ಅಧೀನದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ರಾಜ್ಯಮಟ್ಟದ ಕಾರ್ಯಕ್ರಮ ಸಹಾಯಕರು ಹುದ್ದೆಗೆ ಪದವೀಧರರಿಂದ ಅರ್ಜಿ ಆಹ್ವಾನಿಸಿದೆ. ವಿವರಗಳು ಈ ಕೆಳಗಿನಂತಿದೆ.
ರಾಜ್ಯ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ತನ್ನ ಇಲಾಖೆಯಲ್ಲಿ ಖಾಲಿ ಇರುವ 'ರಾಜ್ಯಮಟ್ಟದ ಕಾರ್ಯಕ್ರಮ ಸಹಾಯಕ' ಹುದ್ದೆಗೆ ನೇಮಕಾತಿ ಮಾಡಿಕೊಳ್ಳಲು ಅಧಿಸುಚನೆ ಹೊರಡಿಸಿದೆ.
ಈ ನೇಮಕ ಹೊರಗುತ್ತಿಗೆ ಆಧಾರದಲ್ಲಿ ಇರುತ್ತದೆ. ಈ ಹುದ್ದೆಯಲ್ಲಿ ಆಸಕ್ತಿ ಇರುವವರು ಕೆಳಗಿನ ಮಾಹಿತಿಗಳನ್ನು ತಿಳಿದು ಅರ್ಜಿ ಸಲ್ಲಿಸಿ. ಪದವಿ ಪಾಸ್ ಮಾಡಿದ ಅಭ್ಯರ್ಥಿಗಳು ಅರ್ಜಿ ಹಾಕಬಹುದು.
ಉದ್ಯೋಗ ಇಲಾಖೆ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
ಹುದ್ದೆ ಹೆಸರು: ರಾಜ್ಯಮಟ್ಟದ ಕಾರ್ಯಕ್ರಮ ಸಹಾಯಕರು
ಹುದ್ದೆಗಳ ಸಂಖ್ಯೆ : ಎಷ್ಟು ಹುದ್ದೆಗಳನ್ನು ನೇಮಕ ಮಾಡಲಾಗುತ್ತದೆ ಎಂದು ತಿಳಿಸಿಲ್ಲ.
ಹುದ್ದೆಯ ಅವಧಿ: ಆರಂಭದಲ್ಲಿ 11 ತಿಂಗಳು ನೇಮಕ ಮಾಡಿಕೊಳ್ಳಲಾಗುತ್ತದೆ. ನಂತರ ಕಾರ್ಯದಕ್ಷತೆ ಆಧಾರದಲ್ಲಿ ಮುಂದುವರಿಸುವ ಅವಕಾಶ ಇರುತ್ತದೆ.
ವಿದ್ಯಾರ್ಹತೆ: ಸಮಾಜ ವಿಜ್ಞಾನ / ಸಮಾಜ ಕಾರ್ಯ / ಗ್ರಾಮೀಣ ನಿರ್ವಹಣೆ / ಸಂಖ್ಯಾಶಾಸ್ತ್ರ ಇವುಗಳಲ್ಲಿ ಯಾವುದಾದರೊಂದು ಪದವಿ ಪಡೆದಿರಬೇಕು.
ಸೇವಾ ಅನುಭವ:
- ಸರ್ಕಾರಿ / ಸ್ವಯಂ ಸೇವಾ ಸಂಸ್ಥೆಗಳಲ್ಲಿ ಕನಿಷ್ಠ 2 ವರ್ಷಗಳ ಅನುಭವ ಹೊಂದಿರಬೇಕು.
- ಡೇಟಾ ಎಂಟ್ರಿ, MS Office ಬಳಕೆ ಗೊತ್ತಿರಬೇಕು.
- ಸ್ಥಳೀಯ ಭಾಷೆ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಸಂವಹನ ಮಾಡಲು ಸಮರ್ಥರಿರಬೇಕು.
ಗೌರವಧನ ರೂ. 25,000 ಪ್ರತಿ ತಿಂಗಳು
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕೃತ ವೆಬ್‌ಸೈಟ್: https://wcd.karnataka.gov.in/
ಅರ್ಜಿ ಸಲ್ಲಿಕೆ ಹೇಗೆ?: ತಮ್ಮ ಸ್ವ ವಿವರ ಇರುವ ಅರ್ಜಿಗಳನ್ನು ಸೂಕ್ತ ದಾಖಲೆಗಳ ಸಹಿತ ಈ ಕೆಳಗೆ ನೀಡಿದ ವಿಳಾಸಕ್ಕೆ ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ಕೊನೆ ದಿನ : 15-07-2022
ಅರ್ಜಿ ಸಲ್ಲಿಸಬೇಕಾದ ವಿಳಾಸ:
ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, 2ನೇ ಮಹಡಿ, ಬಹುಮಹಡಿಗಳ ಕಟ್ಟಡ, ಡಾ || ಬಿ ಆರ್ ಅಂಬೇಡ್ಕರ್ ವೀಧಿ, ಬೆಂಗಳೂರು-560001.