ಬೆಂಗಳೂರು : ಇಂಜಿನಿಯರಿಂಗ್ ವಿದ್ಯಾರ್ಥಿನಿ ಕಾಲೇಜು ಹಾಸ್ಟೆಲ್ ನಲ್ಲಿಯೇ ಆತ್ಮಹತ್ಯೆ; ಕಾರಣ ಇನ್ನೂ ನಿಗೂಢ
Thursday, July 21, 2022
ಬೆಂಗಳೂರು : ಇಂಜಿನಿಯರಿಂಗ್ ವಿದ್ಯಾರ್ಥಿನಿಯೋರ್ವಳು ಕಾಲೇಜು ಹಾಸ್ಟೆಲ್ ನಲ್ಲಿಯೇ ಆತ್ಮಹತ್ಯೆಗೈದಿರುವ ಘಟನೆ ಬೆಂಗಳೂರಿನ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಜೆಎಸ್ಎಸ್ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿನಿ ಶಿವಾನಿ(21) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.
ಈಕೆ ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ಇನ್ನೂ ತಿಳಿದುಬಂದಿಲ್ಲ. ಮೃತದೇಹವನ್ನು ಮಹಜರು ಮಾಡಲು ಆಸ್ಪತ್ರೆಗೆ ರವಾನಿಸಲಾಗಿದೆ. ಈ ಬಗ್ಗೆ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.