ಮಂಗಳೂರು: ಸೆಪ್ಟೆಂಬರ್ 2ರಂದು 'ನಮೋ' ಮಂಗಳೂರಿಗೆ
Monday, August 22, 2022
ಮಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಸೆಪ್ಟೆಂಬರ್ 2ರಂದು ಮಂಗಳೂರಿಗೆ
ಭೇಟಿ ನೀಡಲಿದ್ದಾರೆ.
ಅಂದು ಅವರು ಪಣಂಬೂರು ನವ ಮಂಗಳೂರು ಬಂದರಿನಲ್ಲಿ ಸಾಗರಮಾಲಾ ಯೋಜನೆಗೆ ಚಾಲನೆ ನೀಡಲಿದ್ದಾರೆ. ಆ ಬಳಿಕ ನಗರದ ಬಂಗ್ರಕೂಳೂರಿನ ಗೋಲ್ಡ್ ಪಿಂಚ್ ಸಿಟಿಯಲ್ಲಿ ನಡೆಯುವ ಬೃಹತ್ ಸಾರ್ವಜನಿಕ ಸಭೆಯಲ್ಲಿ ಜನತೆನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಪ್ರಧಾನಿ ಮೋದಿಯವರು ಆಗಮನ ಬಿಜೆಪಿ ಪಾಳಯದಲ್ಲಿ ಹೊಸ ಹುಮ್ಮಸ್ಸನ್ನು ತಂದಿದೆ. ದ.ಕ.ಜಿಲ್ಲೆಯ ಪ್ರತೀ ತಾಲೂಕಿನಿಂದ 25 ಸಾವಿರಕ್ಕೂ ಅಧಿಕ ಮಂದಿ ಈ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಬಿಜೆಪಿ ಸೂಚನೆ ನೀಡಿದೆ ಎನ್ನಲಾಗುತ್ತಿದೆ. ಪ್ರವೀಣ್ ನೆಟ್ಟಾರು ಹತ್ಯೆ ವಿಚಾರದ ಬಳಿಕ ಬಿಜೆಪಿ ಕಾರ್ಯಕರ್ತರಿಂದ ಜನಸಾಮಾನ್ಯರಿಂದ ಬಿಜೆಪಿಯ ವಿರುದ್ಧ ಅಸಮಾಧಾನ ವ್ಯಕ್ತವಾಗಿತ್ತು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಮೇಲೆ ಬಹಿರಂಗವಾಗಿ ಆಕ್ರೋಶ ವ್ಯಕ್ತಪಡಿಸಿದ್ದರು. ಸಿಎಂ ಬೊಮ್ಮಾಯಿ ಭೇಟಿ ವೇಳೆ ಬಿಜೆಪಿ ಕಾರ್ಯಕರ್ತರು ಬಿಜೆಪಿ ವಿರುದ್ಧ ಘೋಷಣೆ ಕೂಗಿದ್ದರು. ಆ ಬಳಿಕದ ಸಮೀಕ್ಷೆಯಲ್ಲೂ ಬಿಜೆಪಿಗೆ ಸೋಲುವ ಭೀತಿ ಎದುರಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿಯವರು ಆಗಮಿಸುತ್ತಿರುವುದು ರಾಜ್ಯ ಬಿಜೆಪಿಗೆ ಬೂಸ್ಟ್ ನೀಡುವಂತಿದೆ.