ತುಮಕೂರು: ಲಾರಿ - ಕ್ರೂಸರ್ ಮಧ್ಯೆ ಭೀಕರ ಅಪಘಾತ ಮಕ್ಕಳು ಸೇರಿದಂತೆ 9ಮಂದಿ ಸಾವು; 14 ಮಂದಿ ಗಂಭೀರ ಗಾಯ
Thursday, August 25, 2022
ತುಮಕೂರು: ಬೆಂಗಳೂರಿನೆಡೆಗೆ ಪ್ರಯಾಣಿಸುತ್ತಿದ್ದ ಕ್ರೂಸರ್ ವಾಹನಕ್ಕೆ ಹಿಂದಿನಿಂದ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಕ್ರೂಸರ್‌ನಲ್ಲಿದ್ದ 9 ಮಂದಿ ಸ್ಥಳದಲ್ಲೇ ಮೃತಪಟ್ಟು , 14 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಿರಾ ತಾಲೂಕಿನ ಬಾಲೆನಹಳ್ಳಿ ಗೇಟ್ ಬಳಿ ಗುರುವಾರ ಬೆಳಗಿನ ಜಾವ ನಡೆದಿದೆ.
ಈ ಕ್ರೂಸರ್ ನಲ್ಲಿ ಸುಮಾರು 23 ಮಂದಿ ಪ್ರಯಾಣ ಮಾಡುತ್ತಿದ್ದರು ಎನ್ನಲಾಗಿದೆ. ಎಲ್ಲರೂ ಕೂಲಿಕಾರ್ಮಿಕರಾಗಿದ್ದು, ರಾಯಚೂರು ಜಿಲ್ಲೆಯ ಮಾನ್ವಿಯಿಂದ ಬೆಂಗಳೂರಿನೆಡೆಗೆ ಪ್ರಯಾಣ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ .
ಮಾನ್ವಿ ತಾಲೂಕಿನ ಸುಜಾತಾ ( 25 ) , ಲಕ್ಷ್ಮಿ ( 13 ) , ವಿನೋದ್ ( 3 ) , ಕ್ರೂಸರ್ ಚಾಲಕ ಕೃಷ್ಣಪ್ಪ ( 25 ) ಮೃತಪಟ್ಟಿದ್ದಾರೆ ತಿಳಿದುಬಂದಿದ್ದು, ಉಳಿದವರ ಹೆಸರನ್ನು ಪೊಲೀಸರು ಪತ್ತೆ ಹಚ್ಚುತ್ತಿದ್ದಾರೆ. ತುಮಕೂರು ಜಿಲ್ಲೆ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಾಪುರ್ ವಾಡ್ ಹಾಗೂ ಅಡಿಷನಲ್ ಎಸ್ಪಿ ಟಿಜೆ ಉದ್ದೇಶ, ಶಿರಾ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ವಾಹನವನ್ನು ತೆರವುಗೊಳಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುವ ಕಾರ್ಯ ಮಾಡಿದ್ದಾರೆ .