ಕೋಲಾರ ಬಿಜೆಪಿ ಜಿಲ್ಲಾಧ್ಯಕ್ಷರ ಕಾರು ಢಿಕ್ಕಿ: ಬೈಕ್ ಸವಾರ ದಾರುಣ ಸಾವು
Wednesday, August 17, 2022
ಕೋಲಾರ : ಕೋಲಾರ ಬಿಜೆಪಿ ಜಿಲ್ಲಾಧ್ಯಕ್ಷರ ಕಾರು ಢಿಕ್ಕಿ ಹೊಡೆದು ಬೈಕ್ ಸವಾರ ದಾರುಣವಾಗಿ ಮೃತಪಟ್ಟ ಘಟನೆ ಬುಧವಾರ ಬೆಳಗ್ಗೆ ಶ್ರೀನಿವಾಸಪುರ ಮುಖ್ಯರಸ್ತೆಯ ಪಾತಪಲ್ಲಿ ಗ್ರಾಮದ ಬಳಿ ಸಂಭವಿಸಿದೆ.
ಪಾತಪಲ್ಲಿ ಗ್ರಾಮದ ನಿವಾಸಿ ರಾಜಣ್ಣ(50) ಮೃತಪಟ್ಟವರು. ಕೋಲಾರ ಜಿಲ್ಲೆಯ ವೇಣುಗೋಪಾಲ್ ಅವರು ಪ್ರಯಾಣಿಸುತ್ತಿದ್ದ ಕಾರು ರಾಜಣ್ಣ ಸಂಚರಿಸುತ್ತಿದ್ದ ಬೈಕ್ ಗೆ ಢಿಕ್ಕಿ ಹೊಡೆದಿದೆ. ಪರಿಣಾಮ ಅವರು ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ. ಅತಿವೇಗದ ಚಾಲನೆಯೇ ಈ ಅಪಘಾತಕ್ಕೆ ಕಾರಣವೆಂದು ಸ್ಥಳೀಯರು ಆರೋಪಿಸಿದ್ದಾರೆ
ಘಟನಾ ಸ್ಥಳಕ್ಕೆ ಶ್ರೀನಿವಾಸ ಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಶ್ರೀನಿವಾಸ ಪುರ ಸರಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.