ಚಿತ್ರದುರ್ಗ: ಭೀಕರ ರಸ್ತೆ ಅಪಘಾತಕ್ಕೆ ಮೂವರು ಬಲಿ
Saturday, August 27, 2022
ಚಿತ್ರದುರ್ಗ: ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆಯ ಸೀಬಾರ ಬಳಿ ಈ ನಡೆದಿದೆ. ಘಟನೆಯಲ್ಲಿ ಇಬ್ಬರು ಮಹಿಳೆಯರು ಹಾಗೂ ಪುರುಷರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಬೆಂಗಳೂರಿನ ರಾಜಾಜಿನಗರದ ನಿವಾಸಿಗಳಾದ ಮನೀಷ್ ( 40 ) , ಸಿಂಚನಾ ( 35 ) ಹಾಗೂ ಭೂಮಿಕಾ ( 19 ) ಮೃತಪಟ್ಟ ದುರ್ದೈವಿಗಳು. ಘಟನೆಯಲ್ಲಿ ಕನಗುಮುತ್ತು , ಗಿರಿಧರ್ ಹಾಗೂ ಕಿರಣ್ ಗಾಯಗೊಂಡಿದ್ದಾರೆಂದು ತಿಳಿದು ಬಂದಿದೆ.
ಕಾರು ಚಿತ್ರದುರ್ಗದಿಂದ ದಾವಣಗೆರೆ ಕಡೆಗೆ ತೆರಳುತ್ತಿದ್ದು, ಲಾರಿ ಬೆಂಗಳೂರು ಕಡೆಗೆ ಸಾಗುತ್ತಿತ್ತು. ನಿನ್ನೆ ರಾತ್ರಿ 9.30 ಸುಮಾರಿಗೆ ಚಿತ್ರದುರ್ಗದ ಹೊರವಲಯದ ಸೀಬಾರ ಬಳಿ ಬರುತ್ತಿದ್ದಂತೆ ಕಾರು ನಿಯಂತ್ರಣ ತಪ್ಪಿ ರಸ್ತೆ ವಿಭಜಕ್ಕೆ ಡಿಕ್ಕಿಯಾಗಿ ಬಳಿಕ ಲಾರಿಗೆ ಗುದ್ದಿದೆ. ಪರಿಣಾಮ ಮೂವರು ಮೃತಪಟ್ಟಿದ್ದಾರೆ. ಅಲ್ಲದೆ ಲಾರಿಯಲ್ಲಿದ್ದ ಒಬ್ಬರು ಹಾಗೂ ಕಾರಿನಲ್ಲಿದ್ದ ಇಬ್ಬರು ಗಾಯಾಳುಗಳನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಭೇಟಿ ನೀಡಿರುವ ಎಸ್‌ಪಿ ಕೆ.ಪರಶುರಾಮ್ ಪರಿಶೀಲನೆ ನಡೆಸಿದ್ದಾರೆ.