
ಮೈಸೂರು - ಬೆಂಗಳೂರು ದಶಪಥದಲ್ಲಿ ಭೀಕರ ರಸ್ತೆ ಅಪಘಾತ: ಓರ್ವ ಮೃತ್ಯು, ಮತ್ತೋರ್ವ ಗಂಭೀರ ಗಾಯ
Sunday, August 28, 2022
ರಾಮನಗರ: ಇಲ್ಲಿನ ಬೆಂಗಳೂರು - ಮೈಸೂರು ದಶಪಥದಲ್ಲಿ ನಡೆದ ಭೀಕರ ರಸ್ತೆ ಅಪಘಾತಕ್ಕೆ ಓರ್ವ ಬಲಿಯಾಗಿ ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ.
ತೆಂಗಿನಕಾಯಿಗಳನ್ನು ಹೇರಿಕೊಂಡು ಬರುತ್ತಿದ್ದ ಕ್ಯಾಂಟರ್ ಹಾಗೂ ಬೊಲೆರೋ ಸರಕು ಸಾಗಾಣಿಕೆಯ ವಾಹನಗಳ ನಡುವೆ ಡಿಕ್ಕಿಯಾಗಿ ಈ ಅಪಘಾತ ಉಂಟಾಗಿದೆ. ಈ ಅಪಘಾತದಲ್ಲಿ ಟ್ಯಾಂಕರ್ ಚಲಾಯಿಸುತ್ತಿದ್ದ ತಮಿಳುನಾಡು ಮೂಲದ ಚಾಲಕ ಮೃತಪಟ್ಟಿದ್ದಾನೆ. ಬೊಲೆರೋ ಸರಕು ಸಾಗಣಿಕಾ ವಾಹನ ಚಾಲಕನ ಕಾಲು ಮುರಿತಗೊಂಡಿದೆ. ಆತನನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಚಾಲಕನ ಮೃತದೇಹವನ್ನು ರಾಮನಗರ ಜಿಲ್ಲಾಸ್ಪತ್ರೆಯಲ್ಲಿ ಇರಿಸಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನ ನಡೆಸಿದ್ದಾರೆ.