
ವಿಜಯಪುರ: ಭೀಕರ ರಸ್ತೆ ಅಪಘಾತಕ್ಕೆ ಬಾಣಂತಿ, ಮೂರು ತಿಂಗಳ ಹಸುಗೂಸು ಸೇರಿ ಒಂದೇ ಕುಟುಂಬದ ಮೂವರು ಮೃತ್ಯು
Thursday, September 1, 2022
ವಿಜಯಪುರ: ಸಾರಿಗೆ ಬಸ್ ಹಾಗೂ ಎರಡು ಕಾರುಗಳ ನಡುವೆ ನಡೆದಿರುವ ಸರಣಿ ಅಪಘಾತದಲ್ಲಿ ಮೂರು ತಿಂಗಳ ಹಸುಗೂಸು, ಬಾಣಂತಿ ಸೇರಿದಂತೆ ಒಂದೇ ಕುಟುಂಬದ ಮೂವರು ದಾರುಣವಾಗಿ ಮೃತಪಟ್ಟ ಘಟನೆ ಕೊಲ್ಲಾರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 218ರ ಕುಪಕಡ್ಡಿ ಕ್ರಾಸ್ ಬಳಿಯಲ್ಲಿ ಬುಧವಾರ ಸಂಜೆ ನಡೆದಿದೆ. ಈ ದುರ್ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಕಲಬುರಗಿ ಮೂಲದ ಸುನಂದಾ ಮಲ್ಲಿಕಾರ್ಜುನ ಕಲಶೆಟ್ಟಿ ( 25 ) , ಹಸುಗೂಸು ಸುಮನ್ ( 3 ತಿಂಗಳು ) ಹಾಅಗೂ ಶರಣಮ್ಮ ಬಸವರಾಜ್ ಕಲಶೆಟ್ಟಿ ( 55 ) ಮೃತಪಟ್ಟ ದುರ್ದೈವಿಗಳು.
ಉಮೇಶ ಕಲಶೆಟ್ಟಿ ಎಂಬವರ ಪತ್ನಿ ಸುರೇಖಾ, ಮಕ್ಕಳಾದ ಸುಹಾನ್ (8 ತಿಂಗಳು) ಹಾಗೂ ಸಾನ್ವಿ (2) ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಕಾರೊಂದು ಸರಕಾರಿ ಬಸ್ಸನ್ನು ಓವರ್ ಟೇಕ್ ಮಾಡುವ ಭರದಲ್ಲಿ ಬಸ್ ಮತ್ತು ಕಾರಿಗೆ ಢಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ . ಈ ಬಗ್ಗೆ ಕೊಲ್ಲಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .