ಶಿವಮೊಗ್ಗ ಹಿಂಸಾಚಾರ ಪ್ರಕರಣ: ಇಬ್ಬರು ಅರೆಸ್ಟ್, ಪ್ರಮುಖ ಆರೋಪಿಗೆ ಗುಂಡೇಟು
Tuesday, August 16, 2022
ಶಿವಮೊಗ್ಗ : ಇಲ್ಲಿನ ಮಾಲ್ ವೊಂದರಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಹಾಕಿರುವ ವೀರ್ ಸಾವರ್ಕರ್ ಹಾಗೂ ಟಿಪ್ಪು ಫೋಟೋ ವಿವಾದ ಹಿಂದೂ ಮತ್ತು ಮುಸ್ಲಿಂ ಸಮುದಾಯದ ನಡುವೆ ಕಿಚ್ಚು ಹಚ್ಚಿಸಿ ಹಿಂಸಾಚಾರಕ್ಕೆ ತಿರುಗಿತ್ತು. ಈ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿತ್ತು.
ಇದರ ಹೊರತಾಗಿಯೂ ಪ್ರೇಮ್ ಸಿಂಗ್ ಮತ್ತು ಪ್ರವೀಣ್ ಕುಮಾರ್ ಎನ್ನುವವರಿಗೆ ಚಾಕುವಿನಿಂದ ಇರಿದು ಇನ್ನಷ್ಟು ಹಿಂಸಾಚಾರಕ್ಕೆ ಪ್ರಚೋದನೆ ನೀಡಿರುವ ಘಟನೆ ನಡೆದಿತ್ತು. ಈ ಗಲಾಟೆಗೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಜಬೀವುಲ್ಲಾ ಮೇಲೆ ಪೊಲೀಸರು ಫೈರಿಂಗ್ ಮಾಡಿರುವ ಘಟನೆ ಶಿವಮೊಗ್ಗದ ತೀರ್ಥಹಳ್ಳಿ ನಮೋ ಶಂಕರ ಲೇಔಟ್ ನಲ್ಲಿ ತಡರಾತ್ರಿ ಈ ಘಟನೆ ನಡೆದಿದೆ.
ಖಚಿತ ಮಾಹಿತಿಯ ಮೇರೆಗೆ ಜಬೀವುಲ್ಲಾ ಬಂಧನಕ್ಕೆ ಪೊಲೀಸರು ತೆರಳಿದ್ದರು. ಬಂಧನಕ್ಕೆ ತೆರಳಿರುವ ವೇಳೆ ಪೊಲೀಸರ ಮೇಲೆಯೇ ಜಬೀವುಲ್ಲಾ ಹಲ್ಲೆಗೆ ಮುಂದಾಗಿದ್ದಾನೆ. ಈ ವೇಳೆ ಜಬೀವುಲ್ಲಾ ಕಾಲಿಗೆ ಸಬ್ ಇನ್ ಸ್ಪೆಕ್ಟರ್ ಮಂಜುನಾಥ್ ಫೈರ್ ಮಾಡಿದ್ದಾರೆ. ಗುಂಡೇಟು ಬಿದ್ದಿರುವ ಈತನನ್ನು ಗಾಯಾಳುಗಳಿಗೆ ಚಿಕಿತ್ಸೆ ನೀಡುತ್ತಿರುವ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಈತನನ್ನು ಪೊಲೀಸರು ಮೆಗ್ಗಾನ್ ಜೈಲ್ ವಾರ್ಡ್ ಗೆ ಪೊಲೀಸರು ಶಿಫ್ಟ್ ಮಾಡಿದ್ದಾರೆ.
ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ದೊಡ್ಡಪೇಟೆ ಪೊಲೀಸರು ಶಿವಮೊಗ್ಗ ಜೆಸಿ ನಗರದ ನದೀಮ್ (25) ಹಾಗೂ ಬುದ್ಧ ನಗರದ ಅಬ್ದುಲ್ ರೆಹಮಾನ್ (25) ಎಂಬಿಬ್ಬರನ್ನು ಬಂಧಿಸಲಾಗಿದೆ. ಮತ್ತಿಬ್ಬರ ಬಂಧನಕ್ಕೆ ಪೊಲೀಸರಿಂದ ಕಾರ್ಯಾಚರಣೆ ಮುಂದುವರಿದಿದೆ.
ಚಾಕು ಇರಿತಕ್ಕೆ ಒಳಗಾದ ಪ್ರೇಮ್ ಸಿಂಗ್ ರಾಜಸ್ಥಾನ ಮೂಲದ ಬಾಡಮೇರ ಜಿಲ್ಲೆಯಾವರು. ನಾಲ್ಕು ವರ್ಷದ ಹಿಂದೆ ಶಿವಮೊಗ್ಗಕ್ಕೆ ಕೆಲಸಕ್ಕೆಂದು ಬಂದಿದ್ದರು. ಕಳೆದ ಒಂದೂ ವರ್ಷಗಳಿಂದ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದಾನೆ . ನಿನ್ನೆಯೂ ಅಂಗಡಿ ಮಾಲೀಕರ ಸೂಚನೆಯಂತೆ ಮಧ್ಯಾಹ್ನ ಮೂರು ಗಂಟೆಗೆ ಅಂಗಡಿ ಮುಚ್ಚಿ ಮನೆಗೆ ಹೊರಟಿದ್ದ ಪ್ರೇಮ್ ಸಿಂಗ್ . ಈ ವೇಳೆ ಚಾಕುವಿನಿಂದ ಇರಿದ ಜಬೀವುಲ್ಲ ಅಂಡ್ ಗ್ಯಾಂಗ್ ಹಲ್ಲೆ ಮಾಡಿದೆ . ಗಂಭೀರವಾಗಿ ಗಾಯಗೊಂಡಿರುವ ಪ್ರೇಮ್ ಸಿಂಗ್ ಮೆಗ್ಗಾನ್ ಆಸ್ಪತ್ರೆಯ ಎನ್ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.