
Kadaba :- ಧ್ವಜಾರೋಹಣದ ವೇಳೆ ಕುಸಿದು ಬಿದ್ದ ನಿವೃತ್ತ ಸೈನಿಕ ಮೃತ್ಯು!
Monday, August 15, 2022
ಕಡಬ
ಕುಟ್ರುಪಾಡಿ ಗ್ರಾ.ಪಂ. ವತಿಯಿಂದ ಹಳೆಸ್ಟೇಷನ್ ಅಮೃತ ಸರೋವರದ ಬಳಿ ನಡೆದ ಧ್ವಜಾರೋಹಣ ದ ವೇಳೆ ನಿವೃತ್ತ ಸೈನಿಕರೋರ್ವರು ಕುಸಿದು ಬಿದ್ದು ಅಸ್ವಸ್ಥಗೊಂಡು ಬಳಿಕ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟ ಘಟನೆ ನಡೆದಿದೆ.
ಧ್ವಜಾರೋಹಣವನ್ನು ಹೊಸಮಠ ಸಿ.ಎ.ಬ್ಯಾಂಕಿನ ಮಾಜಿ ಅಧ್ಯಕ್ಷ ಎನ್. ಕರುಣಾಕರ ಗೋಗಟೆ ಧ್ವಜಾರೋಹಣ ಮಾಡಲು ಸಿದ್ದತೆ ಮಾಡುತ್ತಿದ್ದಾಗ ಅವರಿಗೆ ನಿವೃತ್ತ ಸೈನಿಕ ಗಂಗಾಧರ ಗೌಡ ಅವರು ದ್ವಜ ವಂದನೆಯ ಮಾಹಿತಿ ನೀಡಿ ಧ್ವಜಾರೋಹಣ ಕ್ಕೆ ಸಿದ್ದವಾಗುತ್ತಿದ್ದ ವೇಳೆ ಗಂಗಾಧರ ಗೌಡ ಕುಸಿದು ಬಿದ್ದು ಅಸ್ವಸ್ಥಗೊಂಡ ಅವರನ್ನು ಆಸ್ಪತ್ರೆಗೆ ಕೊಂಡೊಯ್ಯುತ್ತಿದ್ದ ವೇಳೆ ದಾರಿ ಮದ್ಯದಲ್ಲಿ ಮೃತಪಟ್ಟಿದ್ದಾರೆ.