
Kadaba :-ಕುಕ್ಕೆ - ಧರ್ಮಸ್ಥಳಕ್ಕೆ ಆಗಮಿಸಿದ ಪ್ರವಾಸಿಗರ ಕಾರುಗಳ ನಡುವೆ ಡಿಕ್ಕಿ. ಏಳು ಮಂದಿಗೆ ಗಾಯ.
Sunday, August 28, 2022
ಕಡಬ
ಎರ್ಟಿಗಾ ಕಾರು ಹಾಗೂ ಮಾರುತಿ ಓಮ್ನಿ ಕಾರುಗಳ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಏಳು ಮಂದಿ ಗಾಯಗೊಂಡ ಘಟನೆ ಧರ್ಮಸ್ಥಳ ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ನೆಟ್ಟಣ ಎಂಬಲ್ಲಿ ಶನಿವಾರದಂದು ನಡೆದಿದೆ.
ಬೆಂಗಳೂರು ಮೂಲದ ಕುಟುಂಬವು ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ವೇಳೆ ನೆಟ್ಟಣ (ಸುಬ್ರಮಣ್ಯ ರೋಡ್) ಬಳಿ ಸುಬ್ರಹ್ಮಣ್ಯದಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಓಮ್ನಿ ನಡುವೆ ಢಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಒಟ್ಟು ಏಳು ಮಂದಿ ಗಾಯಗೊಂಡಿದ್ದು, ಗಾಯಾಳುಗಳಿಗೆ ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಓಮ್ನಿ ಕಾರಿನಲ್ಲಿದ್ದ ಪ್ರಯಾಣಿಕರು ಶಿವಮೊಗ್ಗದ ಶಿಕಾರಿಪುರದವರೆಂದು ತಿಳಿದುಬಂದಿದೆ. ಸ್ಥಳಕ್ಕೆ ಕಡಬ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.