ಮಂಗಳೂರಿನಲ್ಲಿ ಅರೆಕಾಲಿಕ ಸ್ವಯಂ ಸೇವಕರಿಗೆ ಯಶಸ್ವಿ ಕಾನೂನು ಕಾರ್ಯಾಗಾರ
ಮಂಗಳೂರಿನಲ್ಲಿ ಅರೆಕಾಲಿಕ ಸ್ವಯಂ ಸೇವಕರಿಗೆ ಯಶಸ್ವಿ ಕಾನೂನು ಕಾರ್ಯಾಗಾರ
ದಕ್ಷಿಣ ಕನ್ನಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಮಂಗಳೂರು ವಕೀಲರ ಸಂಘ (ರಿ) ಇದರ ನೇತೃತ್ವದಲ್ಲಿ ಜಿಲ್ಲೆಯ 'ಅರೆಕಾಲಿಕ ಸ್ವಯಂ ಸೇವಕ'ರಿಗೆ ಒಂದು ದಿನದ ಕಾನೂನು ತರಬೇತಿ ಕಾರ್ಯಾಗಾರ ಮಂಗಳೂರು ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ಯಶಸ್ವಿಯಾಗಿ ನಡೆಯಿತು.
ಸುಳ್ಯ, ಪುತ್ತೂರು, ಬೆಳ್ತಂಗಡಿ, ಬಂಟ್ವಾಳ ಮತ್ತು ಮಂಗಳೂರು ತಾಲೂಕಿನ ಅರೆಕಾಲಿಕ ಸ್ವಯಂ ಸೇವಕರು, ಕಾನೂನು ವಿದ್ಯಾರ್ಥಿಗಳು ಈ ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.
ಕಾರ್ಯಾಗಾರವನ್ನು ದ.ಕ. ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ರವೀಂದ್ರ ಎಂ. ಜೋಷಿ ದೀಪಬೆಳಗಿಸಿ ಉದ್ಘಾಟಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ.ಜೆ. ಶೋಭಾ ಮುಖ್ಯ ಅತಿಥಿಯಾಗಿದ್ದರು.
ಮಂಗಳೂರು ವಕೀಲರ ಸಂಘದ ಅಧ್ಯಕ್ಷರಾದ ಪೃಥ್ವಿರಾಜ್ ರೈ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಭಾರತದ ಸಂವಿಧಾನಿಕ ಹಕ್ಕುಗಳು ಮತ್ತು ಕರ್ತವ್ಯಗಳು, ಪ್ಯಾರಾ ಲೀಗಲ್ ಸೇವೆಗಳು, ಬಾಲ ನ್ಯಾಯ ಕಾಯಿದೆ, ಮಕ್ಕಳ ಹಕ್ಕುಗಳ ರಕ್ಷಣೆ, ಕುಟುಂಬ ಮತ್ತು ವಿವಾಹ ಕುರಿತ ಕಾನೂನು, ಕ್ರಿಮಿನಲ್ ಕಾನೂನು ಮೊದಲಾದ ವಿಷಯಗಳ ಬಗ್ಗೆ ಸಮಗ್ರ ಮಾಹಿತಿ ನೀಡಲಾಯಿತು.