-->
ಹಾಸ್ಟೆಲ್ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ಕಿರುಕುಳ: ಮುರುಘಾ ಶರಣರ ವಿರುದ್ಧ ಪ್ರಕರಣ ದಾಖಲು

ಹಾಸ್ಟೆಲ್ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ಕಿರುಕುಳ: ಮುರುಘಾ ಶರಣರ ವಿರುದ್ಧ ಪ್ರಕರಣ ದಾಖಲು

ಮೈಸೂರು: ರಾಜ್ಯದ ಪ್ರತಿಷ್ಠಿತ ಮಠವಾದ ಚಿತ್ರದುರ್ಗದ ಮುರುಘಾರಾಜೇಂದ್ರ ಬೃಹನ್ಮಠದ ಡಾ.ಶಿವಮೂರ್ತಿ ಶರಣರು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದ ಮೇಲೆ ಮೈಸೂರಿನ ನಝರ್ ಬಾದ್ ಪೊಲೀಸ್ ಠಾಣೆಯಲ್ಲಿ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಮಠದ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತ ಹಾಸ್ಟೆಲ್ ನಲ್ಲಿ ವಾಸ್ತವ್ಯ ಹೂಡಿರುವ ವಿದ್ಯಾರ್ಥಿನಿಯರನ್ನು ಅಲ್ಲಿನ ವಾರ್ಡನ್ ಸ್ವಾಮೀಜಿ ಬಳಿಗೆ ಹಣ್ಣು ಕೊಂಡೊಯ್ಯುವಂತೆ ಒತ್ತಾಯ ಮಾಡುತ್ತಿದ್ದರು. ಈ ವೇಳೆ ವಿದ್ಯಾರ್ಥಿನಿಯರಿಗೆ ಪ್ರಜ್ಞೆ ತಪ್ಪುವಂತೆ ಮಾಡಿ ಸ್ವಾಮೀಜಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದರು ಎಂದು ಸಂತ್ರಸ್ತ ವಿದ್ಯಾರ್ಥಿನಿಯರು ದೂರಿನಲ್ಲಿ ತಿಳಿಸಿದ್ದಾರೆ. ಸ್ವಾಮೀಜಿಯ ಕಿರುಕುಳ ತಾಳಲಾರದೆ ವಿದ್ಯಾರ್ಥಿನಿಯರಿಬ್ಬರು ಬೆಂಗಳೂರಿಗೆ ಹೋಗಿ ಅಲ್ಲಿಂದ ಮೈಸೂರಿನ ಒಡನಾಡಿ ಸಂಸ್ಥೆಗೆ ಬಂದು ತಮ್ಮ ಮೇಲಾದ ಲೈಂಗಿಕ ದೌರ್ಜನ್ಯದ ಬಗ್ಗೆ ಅಳಲು ತೋಡಿಕೊಂಡಿದ್ದಾರೆ. 

ತಕ್ಷಣ ಒಡನಾಡಿಯ ಸ್ಟ್ಯಾನಿ ಮಕ್ಕಳನ್ನು ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರು ಪಡಿಸಿದ್ದಾರೆ. ಬಳಿಕ ಮಕ್ಕಳ ಸಮಿತಿ ಅಧಿಕಾರಿಗಳು ನಝರ್ ಬಾದ್ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ಈ ಸಂಬಂಧ ಸ್ವಾಮೀಜಿ ಮೇಲೆ ಪೊಕ್ಸೊ ಕಾಯ್ದೆಯಡಿ ದೂರು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Ads on article

Advertise in articles 1

advertising articles 2

Advertise under the article