
Sullya:- ಅನ್ಯಕೋಮಿನ ವಿದ್ಯಾರ್ಥಿನಿಯೊಂದಿಗೆ ಮಾತನಾಡಿದ ಹಿನ್ನಲೆಯಲ್ಲಿ ವಿದ್ಯಾರ್ಥಿಗೆ ಹಲ್ಲೆ ಆರೋಪ..! 7 ಜನ ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲು.
Wednesday, August 31, 2022
ಸುಳ್ಯ
ಸುಳ್ಯ ತಾಲೂಕಿನ ಕಸಬಾ ಗ್ರಾಮದ ಕೊಡಿಯಾಲ್ ಬೈಲಿನಲ್ಲಿರುವ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿಯೋರ್ವನಿಗೆ ಹಲ್ಲೆ ಮಾಡಿದ ಆರೋಪದಡಿ 7 ಮಂದಿ ವಿದ್ಯಾರ್ಥಿಗಳ ವಿರುದ್ದ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುಳ್ಯ ತಾಲೂಕಿನ ಕಸಬಾ ಗ್ರಾಮದ ಕೊಡಿಯಾಲಬೈಲು ಪ್ರಥಮ ದರ್ಜೆ ಕಾಲೇಜಿನಲ್ಲಿ ಓದುತ್ತಿರುವ ವಿದ್ಯಾರ್ಥಿಯೋರ್ವ ,ಅದೇ ಕಾಲೇಜಿನಲ್ಲಿ ಓದುತ್ತಿರುವ ಅನ್ಯ ಕೋಮಿನ ವಿದ್ಯಾರ್ಥಿನಿಯೊಂದಿಗೆ ಮಾತನಾಡಿದ್ದರಿಂದ ಹಲ್ಲೆ ನಡೆಸಲಾಗಿದೆ ಎಂದು ದೂರಿನಲ್ಲಿ ಉಲ್ಲೆಖಿಸಲಾಗಿದೆ.
ವಿದ್ಯಾರ್ಥಿ ಕ್ಲಾಸ್ ರೂಂ ನಲ್ಲಿರುವಾಗ ಅದೇ ಕಾಲೇಜಿನಲ್ಲಿ ಓದುತ್ತಿರುವ ಇತರ ಕೆಲವು ವಿದ್ಯಾರ್ಥಿಗಳು ಮಾತನಾಡಲು ಇದೆ ಎಂದು ಹೇಳಿ ಕಾಲೇಜಿನ ಗ್ರೌಂಡ್ ಗೆ ಕರೆಕೊಂಡು ಹೋಗಿ ಕಾಲರ್ ಪಟ್ಟಿ ಹಿಡಿದು ನೀನು ಅನ್ಯ ಕೋಮಿನ ಹುಡುಗಿಯಲ್ಲಿ ಯಾಕೆ ಮಾತನಾಡುತ್ತಿಯಾ ಎಂದು ಹೇಳುತ್ತಾ, ಅವರ ಕೈಯಲ್ಲಿದ್ದ ದೊಣ್ಣೆಯಿಂದ ವಿದ್ಯಾರ್ಥಿಯ ಬೆನ್ನಿಗೆ ಹೊಡೆದು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಪ್ರಸ್ತುತ ಹಲ್ಲೆ ನಡೆಸಿದ ವಿದ್ಯಾರ್ಥಿಗಳ ವಿರುದ್ಧ ಸುಳ್ಯ ಪೊಲೀಸ್ ಠಾಣೆಯಲ್ಲಿ ಅ,ಕ್ರ 96/22 ಕಲಂ 143.147.148.323.324.506. ಜೊತೆಗೆ 149 ಐಪಿಸಿ ಪ್ರಕಾರ ಪ್ರಕರಣ ದಾಖಲಾಗಿದೆ.