Sulya :- ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಬಂಧಿತರಾದ ಮೂರು ಮಂದಿ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡಿ ನ್ಯಾಯಾಲಯ ಆದೇಶ..
Friday, August 12, 2022
ಸುಳ್ಯ
ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದ ಬಿಜೆಪಿಯ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾದ ಮೂರು ಮಂದಿ ಆರೋಪಿಗಳಿಗೆ ಆ.16ರವರೆಗೆ ಪೊಲೀಸ್ ಕಸ್ಟಡಿ ವಿಧಿಸಿ ಸುಳ್ಯ ನ್ಯಾಯಾಲಯವು ಆದೇಶ ನೀಡಿದೆ.
ಪ್ರವೀಣ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳಾದ
ಸುಳ್ಯ ನಿವಾಸಿ ಶಿಯಾಬುದ್ದೀನ್ (33), ರಿಯಾಜ್ ಅಂಕತಡ್ಕ(27), ಎಲಿಮಲೆ ನಿವಾಸಿ ಬಶೀರ್(29) ಎಂಬವರನ್ನು ಬೆಳ್ಳಾರೆಯ ವಿವಿಧ ಕಡೆಗಳಲ್ಲಿ ಮತ್ತು ಪ್ರವೀಣ್ ಅವರ ಅಕ್ಷಯ ಚಿಕನ್ ಸೆಂಟರ್ ಬಳಿ ಕರೆದುಕೊಂಡು ಬಂದು ಸ್ಥಳ ಮಹಜರು ನಡೆಸಿದ ಪೊಲೀಸರು ಅವರನ್ನು ನಿನ್ನೆ ಗುರುವಾರ ಸಂಜೆ ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಹೆಚ್ಚಿನ ತನಿಖೆಗಾಗಿ ಮತ್ತೆ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡುವಂತೆ ಪೊಲೀಸ್ ಅಧಿಕಾರಿಗಳು ಮನವಿಯನ್ನು ಸಲ್ಲಿಸಿದ್ದರು. ಮನವಿ ಪರಿಗಣಿಸಿದ ಮಾನ್ಯ ನ್ಯಾಯಾಲಯವು ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ನೀಡಿದೆ ಎಂದು ತಿಳಿದು ಬಂದಿದೆ.
ಪುತ್ತೂರು ಡಿವೈಎಸ್‌ಪಿ ಗಾನಾ ಪಿ ಕುಮಾರ್, ಸುಳ್ಯ ವೃತ್ತ ನಿರೀಕ್ಷಕ ನವೀನ್‌ಚಂದ್ರ ಜೋಗಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್‌ನಲ್ಲಿ ಆರೋಪಿಗಳನ್ನು ನ್ಯಾಯಾಲಯಕ್ಕೆ ಕರೆತರಲಾಗಿತ್ತು.