
ಬೆಂಗಳೂರು: ಬಸ್ ನಿಲ್ದಾಣದಲ್ಲಿ ದಾಖಲೆಗಳೇ ಇಲ್ಲದ 76ಲಕ್ಷ ರೂ. ಪತ್ತೆ
Wednesday, September 7, 2022
ಬೆಂಗಳೂರು: ನಗರದ ಬಸ್ ನಿಲ್ದಾಣದಲ್ಲಿ ದಾಖಲೆಗಳೇ ಇಲ್ಲದ 76 ಲಕ್ಷ ರೂ. ನಗದು ಪತ್ತೆಯಾಗಿದೆ. ಈ ಹಣದೊಂದಿಗೆ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಬೆಂಗಳೂರಿನ ಶಾಂತಿನಗರ ಬಸ್ ನಿಲ್ದಾಣದಲ್ಲಿ ನಿನ್ನೆ ರಾತ್ರಿ ವೇಳೆ ಇಬ್ಬರ ಬಳಿ ದಾಖಲೆಗಳಿಲ್ಲದ ಹಣವಿದೆ ಎಂದು ಖಚಿತ ಮಾಹಿತಿ ಆಧರಿಸಿ ಸಿಸಿಬಿ ಪೊಲೀಸರು ದಾಳಿನಡೆಸಿದ್ದಾರೆ. ಈ ವೇಳೆ ಆರೋಪಿಗಳನ್ನು ಬಂಧಿಸಲಾಗಿತ್ತು. ಆರೋಪಿಗಳ ಬಳಿಯಿದ್ದ ದಾಖಲೆಗಳಿಲ್ಲದ 76 ಲಕ್ಷ ರೂ. ನಗದನ್ನು ವಶಕ್ಕೆ ತೆಗೆದುಕೊಂಡ ಸಿಸಿಬಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಈ ಬಗ್ಗೆ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಹಣದ ಮೂಲದ ಬಗ್ಗೆ ಆರೋಪಿಗಳಿಬ್ಬರನ್ನು ವಿಚಾರಣೆ ನಡೆಸುತ್ತಿದ್ದಾರೆ.