
ಬಂಟ್ವಾಳ: ಕಾರು ಢಿಕ್ಕಿಯಾಗಿ ನಾಲ್ಕರ ಬಾಲಕ ದಾರುಣ ಸಾವು
Friday, September 2, 2022
ಬಂಟ್ವಾಳ: ಕಾರು ಢಿಕ್ಕಿಯಾದ ಪರಿಣಾಮ ನಾಲ್ಕರ ಬಾಲಕನೋರ್ವ ದಾರುಣವಾಗಿ ಮೃತಪಟ್ಟ ಘಟನೆ ತಾಲೂಕಿನ ಸುರಿಬೈಲು ಕಾಡಂಗಡಿ ಎಂಬಲ್ಲಿ ಶುಕ್ರವಾರ ಸಂಜೆ ನಡೆದಿದೆ.
ಸುರಿಬೈಲು ಕಾಡಂಗಡಿ ಕಲಂದರ್ ಅಲಿ ಸಖಾಫಿ ಎಂಬವರ ಪುತ್ರ ಆದಿಲ್ (4) ಮೃತಪಟ್ಟ ಬಾಲಕ.
ಮೃತಪಟ್ಟ ಬಾಲಕ ಆದಿಲ್ ಅಲ್ಲಿಯೇ ಸಮೀಪದ ದಾರುಲ್ ಅಶ್ ಅರಿಯ ಆಂಗ್ಲ ಮಾಧ್ಯಮ ಶಾಲೆಯ ಎಲ್.ಕೆ.ಜಿ. ವಿದ್ಯಾರ್ಥಿ. ಈತ ಮನೆ ಪಕ್ಕದ ರಸ್ತೆಯಲ್ಲಿಯೇ ನಡೆದುಕೊಂಡು ಹೋಗುತ್ತಿದ್ದ ವೇಳೆ ಮಾರುತಿ ಕಾರೊಂದು ಢಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಮೃತದೇಹ ತುಂಬೆ ಖಾಸಗಿ ಆಸ್ಪತ್ರೆಯಲ್ಲಿದ್ದು ಅಲ್ಲಿಂದ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಬಂಟ್ವಾಳ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿದ್ದಾರೆ .