
ಬಂಟ್ವಾಳ: ತೀವ್ರ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿ ಮೃತ್ಯು
Thursday, September 8, 2022
ಬಂಟ್ವಾಳ: ತೀವ್ರ ಜ್ವರದಿಂದ ಬಳಲುತ್ತಿದ್ದ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ಮೃತಪಟ್ಟಿದ್ದಾರೆ.
ಬಂಟ್ವಾಳ ತಾಲೂಕಿನ ಅಮ್ಟಾಡಿ ನಿವಾಸಿ ಲೋಕೇಶ್ ಎಂಬವರ ಪುತ್ರಿ ಕವಿತಾ ( 20) ಮೃತಪಟ್ಟ ದುರ್ದೈವಿ.
ಸಿದ್ದಕಟ್ಟೆ ಕಾಲೇಜಿನಲ್ಲಿ ಅಂತಿಮ ಬಿಕಾಂ ವಿದ್ಯಾರ್ಥಿನಿಯಾಗಿದ್ದ ಕವಿತಾ ಕಳೆದ ಮೂರು ದಿನಗಳಿಂದ ಜ್ವರದಿಂದ ಬಳಲುತ್ತಿದ್ದಳು. ಆದರೆ ಮಂಗಳವಾರ ವೇಳೆಗೆ ಜ್ವರ ಉಲ್ಬಣಗೊಂಡಿದ್ದು, ತಕ್ಷಣ ಆಕೆಯನ್ನು ತುಂಬೆ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕವಿತಾ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾಳೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.