![ಸ್ಕೂಟಿ ಸ್ಕಿಡ್ ಆಗಿ ಬಿದ್ದಾಗ ಸಹಾಯಕ್ಕೆಂದು ಹಿಡಿದ ವಿದ್ಯುತ್ ಕಂಬದಲ್ಲಿ ವಿದ್ಯುತ್ ಪ್ರವಹಿಸಿ ಯುವತಿ ಸಾವು ಸ್ಕೂಟಿ ಸ್ಕಿಡ್ ಆಗಿ ಬಿದ್ದಾಗ ಸಹಾಯಕ್ಕೆಂದು ಹಿಡಿದ ವಿದ್ಯುತ್ ಕಂಬದಲ್ಲಿ ವಿದ್ಯುತ್ ಪ್ರವಹಿಸಿ ಯುವತಿ ಸಾವು](https://blogger.googleusercontent.com/img/b/R29vZ2xl/AVvXsEhnJU6jKHQq0M2QeYXgrI92kMCR5_tI7VmKCe1M057Yz30vY1lw1kwbvz_P6HoYj9_OjFVbl_-VsuV8G7WVTOF6MscO1XoQN535qoSQbPMPWGFXUDduc_v59bhXhkf4h1Whx3JnsTfLxcF7/s1600/1662480269738188-0.png)
ಸ್ಕೂಟಿ ಸ್ಕಿಡ್ ಆಗಿ ಬಿದ್ದಾಗ ಸಹಾಯಕ್ಕೆಂದು ಹಿಡಿದ ವಿದ್ಯುತ್ ಕಂಬದಲ್ಲಿ ವಿದ್ಯುತ್ ಪ್ರವಹಿಸಿ ಯುವತಿ ಸಾವು
Tuesday, September 6, 2022
ಬೆಂಗಳೂರು: ರಸ್ತೆಯಲ್ಲಿ ನಿಂತ ನೀರಿನಲ್ಲಿ ಸ್ಕೂಟಿ ಚಲಾಯಿಸುತ್ತಿದ್ದ ಯುವತಿ ಸ್ಕಿಡ್ ಆಗಿ ಬಿದ್ದ ಸಂದರ್ಭದಲ್ಲಿ ಹತ್ತಿರದಲ್ಲೇ ಇದ್ದ ವಿದ್ಯುತ್ ಕಂಬವನ್ನು ಹಿಡಿದ ಪರಿಣಾಮ ವಿದ್ಯುತ್ ಪ್ರವಹಿಸಿ ಸಾವನ್ನಪ್ಪಿರುವ ಘಟನೆ ವೈಟ್ ಫೀಲ್ಡ್ ವ್ಯಾಪ್ತಿಯ ಸಿದ್ದಾಪುರದಲ್ಲಿ ನಡೆದಿದೆ.
ಸಿದ್ದಾಪುರ ನಿವಾಸಿ ಅಖಿಲಾ(23) ಮೃತಪಟ್ಟ ಯುವತಿ.
ಸೋಮವಾರ ರಾತ್ರಿ 9ಗಂಟೆಗೆ ಭಾರೀ ಮಳೆಯ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ನೀರು ನಿಂತಿತ್ತು. ಖಾಸಗಿ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದ ಅಖಿಲಾ ಕೆಲಸ ಮುಗಿಸಿ ಸ್ಕೂಟಿಯಲ್ಲಿ ಮನೆ ಕಡೆಗೆ ಬರುತ್ತಿದ್ದರು. ಈ ವೇಳೆ ವೈಟ್ ಫೀಲ್ಡ್ - ಮಾರತಹಳ್ಳಿ ಮುಖ್ಯರಸ್ತೆಯಲ್ಲಿ ಬರುತ್ತಿದ್ದ ವೇಳೆ ಅವರ ಸ್ಕೂಟಿ ಸ್ಕಿಡ್ ಆಗಿದೆ. ಆಗ ರಸ್ತೆಗೆ ಬೀಳುತ್ತಿದ್ದ ಅಖಿಲಾ ಅಲ್ಲಿಯೇ ಪಕ್ಕದಲ್ಲಿರುವ ವಿದ್ಯುತ್ ಕಂಬವನ್ನು ಹಿಡಿದ್ದಾರೆ. ಈ ವೇಳೆ ಅವರಿಗೆ ವಿದ್ಯುತ್ ಶಾಕ್ ಹೊಡೆದಿದೆ.
ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ದರೂ ಅವರು ಬದುಕುಳಿಯಲಿಲ್ಲ. ವಿದ್ಯುತ್ ಕಂಬಗಳ ನಿರ್ವಹಣೆ ಸರಿಯಾಗಿರದಿರದೇ ಈ ದುರ್ಘಟನೆಗೆ ಕಾರಣ ಎಂದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದರು.