
Govt Appointment- ತ್ಯಾಜ್ಯ ವಿಲೇವಾರಿ: ಈಗ ಕಾರ್ಮಿಕರಾಗಲಿದ್ದಾರೆ 'ಸರ್ಕಾರಿ ನೌಕರರು'
ತ್ಯಾಜ್ಯ ವಿಲೇವಾರಿ: ಈಗ ಕಾರ್ಮಿಕರಾಗಲಿದ್ದಾರೆ 'ಸರ್ಕಾರಿ ನೌಕರರು'
ರಾಜ್ಯದ ಈಗಿರುವ ಸ್ಥಳೀಯ ಸಂಸ್ಥೆಗಳಲ್ಲಿ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಸುಮಾರು 11,133 ಪೌರಕಾರ್ಮಿಕರನ್ನು ಸರ್ಕಾರಿ ನೌಕರರೆಂದು ನೇಮಕ ಮಾಡಿಕೊಳ್ಳುವ ಪ್ರಕ್ರಿಯೆ ನಡೆಯುತ್ತಿದೆ. ಈ ಬಗ್ಗೆ ಸಚಿವ ಸಂಪುಟ ತೀರ್ಮಾನ ಕೈಗೊಂಡಿದೆ.
ಸದನದಲ್ಲಿ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜು ತಿಳಿಸಿದ್ದಾರೆ. ಆಯನೂರು ಮಂಜುನಾಥ್ ಅವರ ಪಶ್ನೆಗೆ ಉತ್ತರಿಸಿದ ಅವರು, ಈಗ ತ್ಯಾಜ್ಯ ವಿಲೇವಾರಿಯಲ್ಲಿ ದುಡಿಯುತ್ತಿರುವ ಕಾರ್ಮಿಕರನ್ನು ಸರ್ಕಾರಿ ಸೇವೆಗೆ ಪೂರ್ಣಪ್ರಮಾಣದಲ್ಲಿ ಬಳಸಿಕೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.
'ಪೌರ ಕಾರ್ಮಿಕ'ರ ಮಾದರಿಯಲ್ಲೇ ನಗರ ಮತ್ತು ಮಹಾನಗರ ಪಾಲಿಕೆಗಳಲ್ಲಿ ತ್ಯಾಜ್ಯ ವಿಲೇವಾರಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ವಿವಿಧ ಹಂತದ ಕಾರ್ಮಿಕರನ್ನು ಹಂತ-ಹಂತವಾಗಿ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.
ಈಗ ತ್ಯಾಜ್ಯ ವಿಲೇವಾರಿಯಲ್ಲಿ ತೊಡಗಿಸಿಕೊಂಡಿರುವ ಲೋಡರ್‌ಗಳು, ಕ್ಲೀನರ್‌ಗಳು, ಒಳಚರಂಡಿ ಸ್ವಚ್ಚಗೊಳಿಸುವ ಸಹಾಯಕರನ್ನು ಸರ್ಕಾರಿ ಸೇವೆಯಲ್ಲಿ ಖಾಯಂ ಗೊಳಿಸಲು ಹಣಕಾಸು ಇಲಾಖೆಯೊಂದಿಗೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು.
ಪ್ರಸ್ತುತ ರಾಜ್ಯದ ಸ್ಥಳೀಯ ಸಂಸ್ಥೆಗಳಲ್ಲಿ 806 ಲೋಡರ್, 566 ಕ್ಲಿನರ್, 622 ಯುಜಿಡಿ ಹೆಲ್ಪರ್‌ಗಳು ಮತ್ತು ಚಾಲಕರು ಕಾರ್ಯನಿರ್ವಹಿಸುತ್ತಿದ್ದಾರೆ.