KPSC: ಸಹಾಯಕ ಎಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
KPSC: ಸಹಾಯಕ ಎಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
2022ರ ಫೆಬ್ರವರಿಯಲ್ಲಿ ಕರ್ನಾಟಕ ಲೋಕಸೇವಾ ಆಯೋಗ(KPSC), ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ ಎಂಜಿನಿಯರ್ ಹುದ್ದೆಗಳ (ಗ್ರೇಡ್ –1) ಭರ್ತಿಗಾಗಿ ಅರ್ಜಿ ಆಹ್ವಾನಿಸಿತ್ತು. ಅರ್ಜಿ ಸಲ್ಲಿಸಲು ಮಾರ್ಚ್ 30 ಕೊನೆ ದಿನವಾಗಿತ್ತು. ನಂತರ ಅರ್ಜಿ ಸಲ್ಲಿಕೆಯ ಕೊನೆ ದಿನವನ್ನು ಮೊದಲ ಬಾರಿಗೆ ಏಪ್ರಿಲ್ 18ರವರೆಗೆ ವಿಸ್ತರಿಸಿತ್ತು. ಈಗ ಪುನಃ ಸೆಪ್ಟೆಂಬರ್ 30ರವರೆಗೆ ವಿಸ್ತರಿಸಿ, ಅಧಿಸೂಚನೆ ಹೊರಡಿಸಿದೆ.
ಕಳೆದ ಫೆಬ್ರವರಿಯಲ್ಲಿ ಹೊರಡಿಸಿದ್ದ ಅಧಿಸೂಚನೆಯಲ್ಲಿ 129 ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಲಾಗಿತ್ತು. ಇದೀಗ ಮತ್ತಷ್ಟು ಉದ್ಯೋಗ ಅವಕಾಶ ಉಂಟಾಗಿದ್ದು, ಹೊಸದಾಗಿ 100 ಹುದ್ದೆಗಳನ್ನು ಸೇರಿಸಲಾಗಿದೆ. ಹಾಗಾಗಿ, ಅಧಿಸೂಚನೆಯನ್ನು ಪರಿಷ್ಕರಿಸಿ ಒಟ್ಟು 229 ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
2022ರ ಸೆಪ್ಟಂಬರ್ 2ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 30 ಕೊನೆ ದಿನವಾಗಿದ್ದು, ಅಕ್ಟೋಬರ್ 1ರಂದು ಶುಲ್ಕ ಪಾವತಿಸಲು ಅಂತಿಮ ದಿನವಾಗಿರುತ್ತದೆ.
21-02-2022ರ ಅಧಿಸೂಚನೆಯ ಪ್ರಕಾರ ಈಗಾಗಲೇ ಈ ಹುದ್ದೆಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಮತ್ತೆ ಅರ್ಜಿ ಹಾಕಬೇಕಾಗಿಲ್ಲ. ಇದೇ ಹುದ್ದೆಗೆ ಅರ್ಜಿ ಸಲ್ಲಿಸದ ಅಭ್ಯರ್ಥಿಗಳು ಮಾತ್ರ ಈಗ ಅರ್ಜಿ ಸಲ್ಲಿಸಬಹುದಾಗಿದೆ.
Educatiion Qualification: ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ನಾಗರಿಕ/ಪರಿಸರ ವಿಷಯದಲ್ಲಿ ಬಿ.ಇ ಪೂರ್ಣಗೊಳಿಸಿರಬೇಕು.
Age Limit(ವಯೋಮಿತಿ): ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷಗಳು, ಗರಿಷ್ಠ 35 ವರ್ಷಗಳು. ನಿಯಮಾನುಸಾರ ವಯೋಮಿತಿಯಲ್ಲಿ ಸಡಿಲಿಕೆ ಇದೆ.
ಅರ್ಜಿ ಶುಲ್ಕ: ಅಧಿಸೂಚನೆಯ ಪ್ರಕಾರ ಅರ್ಜಿ ಶುಲ್ಕ ಪಾವತಿಸಬೇಕು.
ಅರ್ಜಿ ಸಲ್ಲಿಸುವ ವಿಧಾನ: ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿಯಲ್ಲಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ನಮೂದಿಸಬೇಕು. ಮೊಬೈಲ್ ಸಂಖ್ಯೆ ಕಡ್ಡಾಯ. ಹಾಗೆಯೇ ಆನ್‌ಲೈನ್ ಮೂಲಕ ಶುಲ್ಕ ಪಾವತಿಸಬೇಕು.
ಅರ್ಜಿ ಸಲ್ಲಿಸುವ ಜಾಲತಾಣ: https://www.kpscrecruitment.in/RPS/Home.aspx
ನೇಮಕಾತಿ ಪ್ರಕ್ರಿಯೆ: ಲಿಖಿತ ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ... ಹೆಚ್ಚಿನ ವಿವರಗಳಿಗೆ ಪರಿಷ್ಕೃತ ಅಧಿಸೂಚನೆಗಾಗಿ ಇಲಾಖೆ ವೆಬ್‌ಸೈಟ್ ನೋಡಬಹುದು.