
ಹುಟ್ಟುಹಬ್ಬದ ಮರುದಿನವೇ ದುಷ್ಕರ್ಮಿಗಳ ದಾಳಿಗೆ ಬಲಿಯಾದ ಯುವಕ
Monday, September 5, 2022
ಬೆಳಗಾವಿ: ಬೆಳಗಾವಿ ಜಿಲ್ಲೆಗೆ ಸಮೀಪದ ಹತ್ತರಗಿ ಎಂಬಲ್ಲಿ ಭಾನುವಾರ ರಾತ್ರಿ ಯುವಕನೋರ್ವನನ್ನು ದುಷ್ಕರ್ಮಿಗಳ ತಂಡ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಕೊಲೆಗೈದಿರುವ ಘಟನೆ ನಡೆದಿದೆ.
ಯಮಕನಮರಡಿ ನಿವಾಸಿ ವಿನಾಯಕ ಸೋಮಶೇಖರ ಹೋರಕೇರಿ (28) ಕೊಲೆಯಾದ ಯುವಕ.
ಸೋಮಶೇಖರ ಹೋರಕೇರಿ ಬೈಕ್‌ನಲ್ಲಿ ಗ್ರಾಮಕ್ಕೆ ಮರಳುತ್ತಿರುವಾಗ ಹಿಂಬಾಲಿಸಿ ಬಂದ ದುಷ್ಕರ್ಮಿಗಳು ತಂಡವೊಂದು ಮನಬಂದಂತೆ ಮಾರಕಾಸ್ತ್ರಗಳಿಂದ ಕೊಚ್ಚಿ ಹಾಕಿದೆ. ತೀವ್ರ ರಕ್ತಸ್ರಾವದಿಂದ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಆರೋಪಿಗಳು ಪರಾರಿಯಾಗಿದ್ದಾರೆ. ಈ ಯುವಕನ ಶನಿವಾರವಷ್ಟೇ ಹುಟ್ಟುಹಬ್ಬ ಆಚರಿಸಿಕೊಂಡಿದ್ದ ಆದರೆ ಭಾನುವಾರ ದುಷ್ಕರ್ಮಿಗಳ ಮಾರಕಾಸ್ತ್ರಗಳಿಗೆ ಬಲಿಯಾಗಿ ಹೋಗಿದ್ದಾನೆ. ಯಮಕನಮರಡಿ ಪಿಎಸ್‌ಐ ಬಿ.ವಿ.ನಾಮಗೌಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಳ್ಳಲಾಗಿದೆ.