-->
ನಾಸಿಕ್ : ಬೆಳ್ಳಂಬೆಳಗ್ಗೆ ಬಸ್ ಗೆ ಹತ್ತಿಕೊಂಡ ಬೆಂಕಿ; ಸುಖನಿದ್ರೆಯಲ್ಲಿದ್ದ 11 ಮಂದಿ ಸಜೀವ ದಹನ, 38 ಮಂದಿಗೆ ಗಾಯ

ನಾಸಿಕ್ : ಬೆಳ್ಳಂಬೆಳಗ್ಗೆ ಬಸ್ ಗೆ ಹತ್ತಿಕೊಂಡ ಬೆಂಕಿ; ಸುಖನಿದ್ರೆಯಲ್ಲಿದ್ದ 11 ಮಂದಿ ಸಜೀವ ದಹನ, 38 ಮಂದಿಗೆ ಗಾಯ


ನಾಸಿಕ್: ಬೆಳ್ಳಂಬೆಳಗ್ಗೆ ಬಸ್‌ವೊಂದಕ್ಕೆ ಬೆಂಕಿ ಹತ್ತಿಕೊಂಡ ಪರಿಣಾಮ 11 ಮಂದಿ ಸಜೀವ ದಹನಗೊಂಡು, 38 ಮಂದಿ ಗಂಭೀರವಾಗಿ ಗಾಯಗೊಂಡ ದಾರುಣ ಘಟನೆ ಮಹಾರಾಷ್ಟ್ರದ ನಾಸಿಕ್‌ನಲ್ಲಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಾಸಿಕ್‌ನ ಔರಂಗಾಬಾದ್ ರಸ್ತೆಯಲ್ಲಿ ಡೀಸೆಲ್ ಸಾಗಿಸುತ್ತಿದ್ದ ಟ್ರೈಲರ್ ಟ್ರಕ್‌ಗೆ ಈ ಬಸ್ ಡಿಕ್ಕಿ ಹೊಡೆದಿದೆ. ಆ ಬಳಿಕ ಈ ಬಸ್‌ಗೆ ಬೆಂಕಿ ಹೊತ್ತಿಕೊಂಡಿದೆ. ಸಾವಿಗೀಡಾದವರಲ್ಲಿ ಹೆಚ್ಚಿನವರು ಬಸ್‌ನ ಕ್ಲೀಪರ್ ಕೋಚ್ ಪ್ರಯಾಣಿಕರಾಗಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಬೆಂಕಿ ಹತ್ತಿಕೊಂಡಿರುವುದಕ್ಕೆ ನಿಖರ ಕಾರಣ ತಿಳಿಯಲು ತನಿಖೆ ನಡೆಸಲಾಗುತ್ತಿದೆ ಎಂದು ನಾಸಿಕ್‌ನ ಉಪ ಪೊಲೀಸ್ ಆಯುಕ್ತ ಅಮೋಲ್ ತಾಂಬೆ ಹೇಳಿದ್ದಾರೆ. 

ಅಪಘಾತದಲ್ಲಿ ತಮ್ಮವರನ್ನು ಕಳೆದುಕೊಂಡ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಆರ್ಥಿಕ ನೆರವು ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಗಾಯಾಳುಗಳಿಗೆ 50,000 ರೂ . ನೀಡಲಾಗುವುದು. ಸಿಎಂ ಏಕನಾಥ್ ಶಿಂಧೆ ಅಪಘಾತದಲ್ಲಿ ಮೃತಪಟ್ಟವರ ಕುಟುಂಬ ಸದಸ್ಯರಿಗೆ ತಲಾ 5 ಲಕ್ಷ ರೂ . ಪರಿಹಾರ ಘೋಷಿಸಿದ್ದಾರೆ. ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಮಹಾರಾಷ್ಟ್ರ ಸರಕಾರವೇ ಭರಿಸಲಿದೆ ಎಂದು ರಾಜ್ಯ ಸಚಿವ ದಾದಾ ಭೂಸೆ ಹೇಳಿದ್ದಾರೆ.

Ads on article

Advertise in articles 1

advertising articles 2

Advertise under the article