ಆಳ್ವಾಸ್ ಪದವಿ ಪೂರ್ವ ಕಾಲೇಜು: ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ
ಮೂಡುಬಿದಿರೆ: ಬೆಳ್ತಂಗಡಿಯ ಪಡಂಗಡಿ ಸರ್ಕಾರಿ ಉನ್ನತೀಕರಿಸಿದ ಪ್ರಾರ್ಥಮಿಕ ಶಾಲೆಯಲ್ಲಿ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರವು ನಡೆಯುತ್ತಿದ್ದು, ಒಂದು ವಾರಗಳ ಕಾಲ ನಡೆಯಲಿರುವ ಈ ಶಿಬಿರವನ್ನು ಕರ್ನಾಟಕ ಸರ್ಕಾರದ ವಿಧಾನ ಪರಿಷತ್ತಿನ ಶಾಸಕ ಪ್ರತಾಪ್ ಸಿಂಹ ನಾಯಕ್ ಅವರು ಉದ್ಘಾಟಿಸಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ತಾವು ವಿದ್ಯಾರ್ಥಿಯಾಗಿದ್ದಾಗ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂಸೇವಕ ಹಾಗೂ ಶಿಬಿರಗಳ ಶಿಬಿರಾರ್ಥಿಯಾಗಿ ಭಾಗವಹಿಸಿದ ದಿನಗಳನ್ನು ನೆನಪಿಸಿಕೊಳ್ಳುತ್ತಾ, ಇಂತಹ ಶಿಬಿರದಲ್ಲಿ ಭಾಗವಹಿಸಿದ ಶಿಬಿರಾರ್ಥಿಗಳಿಗೆ ಗ್ರಾಮೀಣ ಪ್ರದೇಶದ ಜೀವನಾನುಭವ ಸಿಗಲಿದೆ. ಪ್ರತಿಯೊಬ್ಬ ವಿದ್ಯಾರ್ಥಿಗೆ ಅವರವರ ಸಂಕಲ್ಪಗಳನ್ನು ಈಡೇರಿಸಲು ಶಿಬಿರವು ಸಹಕಾರಿಯಾಗಲಿದೆ ಎಂದು ಅಭಿಪ್ರಾಯಪಟ್ಟರು.
ಮುಖ್ಯ
ಅತಿಥಿಯಾಗಿ ಭಾಗವಹಿಸಿದ ಪಡಂಗಡಿ ಗ್ರಾಮ ಪಂಚಾಯತ್ ಸದಸ್ಯ ಸಂತೋಷ್ ಕುಮಾರ್ ಜೈನ್, ಶಿಬಿರಕ್ಕೆ ಶುಭವನ್ನು ಹಾರೈಸಿ ಮಾತನಾಡಿ, ಎಲ್ಲಾ ರೀತಿಯ ಸಹಕಾರವನ್ನು ನೀಡುವುದಾಗಿ ತಿಳಿಸಿದರು.
ಆಳ್ವಾಸ್
ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರೊ. ಮಹಮ್ಮದ್ ಸದಾಕತ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ವೇದಿಕೆಯಲ್ಲಿ ಪಡಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ, ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ. ಎಂ. ಇಸ್ಮಾಯಿಲ್ ಹಾಗೂ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ಡೀನ್ ಪ್ರಶಾಂತ್ ಕುಮಾರ್ ಎಂ ಡಿ ಉಪಸ್ಥಿತರಿದ್ದರು.
ಸಂಸ್ಕೃತ ವಿಭಾಗದ ಮುಖ್ಯಸ್ಥ ಅಂಬರೀಶ್ ಚಿಪ್ಲೂಣ್ಕರ್
ಕಾರ್ಯಕ್ರಮ ನಿರೂಪಿಸಿದರು. ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮಾಧಿಕಾರಿ ಹಾಗೂ ಶಿಬಿರಾಧಿಕಾರಿ ಶಾತಿಟ್ ಮೋನಿಸ್ ಸ್ವಾಗತಿಸಿದರೆ, ಸಹ ಶಿಬಿರಾಧಿಕಾರಿ ಮೇಘನಾ
ವಂದಿಸಿದರು.