ನಗ್ನ ವೀಡಿಯೋ ವೈರಲ್ ಮಾಡುವುದಾಗಿ ಬೆದರಿಸಿ ಮಹಿಳೆಯನ್ನು 7 ವರ್ಷ ಕಾಮತೃಷೆಗೆ ದುರ್ಬಳಕೆ ಮಾಡಿಕೊಂಡಿದ್ದ ಪೊಲೀಸ್ ಅಧಿಕಾರಿ ಅರೆಸ್ಟ್
Saturday, November 12, 2022
ತಿರುವನಂತಪುರಂ: ನಗ್ನ ವಿಡಿಯೋವನ್ನು ಹರಿಬಿಡುವುದಾಗಿ ಬೆದರಿಕೆಯೊಡ್ಡಿ, ಏಳು ವರ್ಷಗಳ ಕಾಲ ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಪೊಲೀಸ್ ಅಧಿಕಾರಿಯನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ.
ಕಚನಿ ಮೂಲದ ಸಬು ಪಣಿಕ್ಕರ್ (48) ಬಂಧಿತ ಆರೋಪಿ. ಈತ ಕೇರಳದ ವಿಜಿಲೆನ್ಸ್ ಗ್ರೇಡ್ ಎಸ್ ಸಿಪಿಒ ಆಗಿ ಕಾರ್ಯ ನಿರ್ವಹಿಸುತ್ತಿದ್ದ. 40 ವರ್ಷದ ಸಂತ್ರಸ್ತೆ ನೀಡಿರುವ ದೂರಿನನ್ವಯ ಅರುವಿಕ್ಕರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಗಂಡನಿಂದ ಬೇರ್ಪಟ್ಟು ಪ್ರತ್ಯೇಕವಾಗಿ ವಾಸಿಸುತ್ತಿರುವ ಮಹಿಳೆಯ ಬೆತ್ತಲೆ ವೀಡಿಯೋವನ್ನು ಆರೋಪಿ ರೆಕಾರ್ಡ್ ಮಾಡಿಟ್ಟುಕೊಂಡಿದ್ದ. ಆ ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುತ್ತೇನೆಂದು ಬೆದರಿಸಿ, ಆಕೆಯ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ ಎಸಗಿದ್ದ.
ಆರೋಪಿ ಸಬು ಪಣಿಕ್ಕರ್ ಸುಮಾರು 7 ವರ್ಷಗಳ ಕಾಲ ಮಹಿಳೆಯನ್ನು ತನ್ನ ಕಾಮತೃಷೆಗೆ ದುರ್ಬಳಕೆ ಮಾಡಿಕೊಂಡಿದ್ದಾನೆ. ಇತ್ತೀಚೆಗೆ ಆರೋಪಿ ಆತನಲ್ಲಿದ್ದ ಮಹಿಳೆಯ ವೀಡಿಯೋ ಕ್ಲಿಪ್ ಅನ್ನು ಹರಿಬಿಟ್ಟಿದ್ದ. ಇದು ತಿಳಿದು ಸಂತ್ರಸ್ತೆ ಇತ್ತೀಚೆಗೆ ಅರುವಿಕ್ಕರ ಪೊಲೀಸರಿಗೆ ದೂರು ನೀಡಿದ್ದರು. ಈ ವಿಡಿಯೋವನ್ನು ವೈರಲ್ ಮಾಡಿರುವ ಇಬ್ಬರನ್ನು ಈಗಾಗಲೇ ಬಂಧಿಸಲಾಗಿದೆ.