
ಮಂಗಳೂರು: ದ.ಕ.ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ರವಿಕುಮಾರ್ ಎಂ.ಆರ್. ಅಧಿಕಾರ ಸ್ವೀಕಾರ
Wednesday, November 2, 2022
ಮಂಗಳೂರು: ದ.ಕ.ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಐಎಎಸ್ ಅಧಿಕಾರಿ ರವಿಕುಮಾರ್ ಎಂ.ಆರ್. ಇಂದು ಅಧಿಕಾರ ಸ್ವೀಕರಿಸಿದರು.
ದ.ಕ.ಜಿಲ್ಲೆಯ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಜವಬ್ದಾರಿ ವಹಿಸಿಕೊಂಡಿದ್ದ ಡಾ.ಕುಮಾರ್ ಅವರಿಂದ ರವಿಕುಮಾರ್ ಎಂ.ಆರ್. ಅಧಿಕಾರ ಸ್ವೀಕರಿಸಿದರು. ಈ ಹಿಂದೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಡಾ.ರಾಜೇಂದ್ರ ಕೆ.ವಿ. ಸುಮಾರು ಎರಡು ವರ್ಷ ಅಧಿಕಾರ ನಡೆಸಿದ್ದರು. ಇದೋಗ ಅವರನ್ನು ಮೈಸೂರು ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ. ಆ ಸಂದರ್ಭ ದಕ್ಷಿಣ ಕನ್ನಡ ಜಿಪಂ ಸಿಇಒ ಡಾ.ಕುಮಾರ್ ಅವರಿಗೆ ದ.ಕ ಜಿಲ್ಲಾಧಿಕಾರಿಯ ಹೆಚ್ಚುವರಿ ಜವಾಬ್ದಾರಿಯನ್ನು ನೀಡಲಾಗಿತ್ತು.
ಇಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ಬೀಕರಿಸಿರುವ ರವಿಕುಮಾರ್ ಎಂ.ಆರ್. 2012ರ ಬ್ಯಾಚ್‌ನ ಕರ್ನಾಟಕ ಕೇಡರ್‌ನ ಐಎಎಸ್ ಅಧಿಕಾರಿ ಆಗಿದ್ದರು. ಸದ್ಯ ಅವರು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಆಗಿ ಸೇವೆಯಲಿದ್ದರು.