ಸುಬ್ರಹ್ಮಣ್ಯ: ಹೊಳೆಯಲ್ಲಿ ಮುಳುಗಿ ಇಬ್ಬರು ಸಾವು
Thursday, November 17, 2022
ಸುಬ್ರಹ್ಮಣ್ಯ: ಇಲ್ಲಿಗೆ ಸಮೀಪದ ಯೇನೆಕಲ್ಲು ಮುಖ್ಯ ರಸ್ತೆಯ ಸೇತುವೆಯ ಬಳಿ ಹೊಳೆಯಲ್ಲಿ ಕೊಚ್ಚಿ ಹೋಗಿ ಇಬ್ಬರು ಮೃತಪಟ್ಟಿರುವ ದಾರುಣ ಘಟನೆಯೊಂದು ಸಂಭವಿಸಿದೆ.
ಧರ್ಮಪಾಲ ಪರಮಲೆ (46) ಮತ್ತು ಬೆಳ್ಯಪ್ಪ ಚಳ್ಳಂಗಾರು, ಚೊಕ್ಕಾಡಿ (49) ಮೃತರು ಎಂದು ಗುರುತಿಸಲಾಗಿದೆ.
ಧರ್ಮಪಾಲ ಕೆಲವು ಕಾಲಗಳಿಂದ ಸುಬ್ರಹ್ಮಣ್ಯ ಗ್ರಾಪಂನಲ್ಲಿ ಕಸವಿಲೇವಾರಿ ಘಟಕದಲ್ಲಿ ದಿನಕೂಲಿ ನೌಕರರಾಗಿ ಕೆಲಸ ಮಾಡುತ್ತಿದ್ದರು. ಹೊಳೆಯಲ್ಲಿದ್ದ ಪಂಪಿನ ಫೂಟ್ ವಾಲ್ ತೆಗೆಯಲು ನೀರಿಗಿಳಿದಾಗ ಆಕಸ್ಮಿಕವಾಗಿ ಕಾಲುಜಾರಿ ನೀರಿನಲ್ಲಿ ಮುಳುಗಿರಬಹುದೆಂದು ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.
ತಕ್ಷಣ ಪೊಲೀಸರು ಕಾರ್ಯಾಚರಣೆ ನಡೆಸಿ ಮುಳುಗು ತಜ್ಞರ ಸಹಾಯದಿಂದ ಇಬ್ಬರ ಮೃತದೇಹಗಳನ್ನು ನೀರಿನಿಂದ ಮೇಲಕ್ಕೆತ್ತಿದ್ದಾರೆ. ಬಳಿಕ ಶವ ಮಹಜರು ನಡೆಸಿ ಕುಟುಂಬಸ್ಥರಿಗೆ ಮೃತದೇಹಗಳನ್ನು ಒಪ್ಪಿಸಿದ್ದಾರೆ.