
ಬಂಟ್ವಾಳ: ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಮೃತ್ಯು
Thursday, November 17, 2022
ಬಂಟ್ವಾಳ: ಬೈಕ್ ಸ್ಕಿಡ್ ಆಗಿರುವ ಪರಿಣಾಮ ತಲೆಗೆ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಇಂದು ನಡೆದಿದೆ.
ಬ್ರಹ್ಮರಕೂಟ್ಟು ಕಳ್ಳಿಗೆ ನಿವಾಸಿ ಮುಝಮ್ಮಿಲ್ ಮೃತ ಯುವಕ.
ನ.9ರಂದು ರಾತ್ರಿ ವೇಳೆ ಬಂಟ್ವಾಳ ತಾಲೂಕು ತುಂಬೆ ಗ್ರಾಮದ ರಾಮಲ್ ಕಟ್ಟೆ ಎಂಬಲ್ಲಿ ಮುಝಮ್ಮಿಲ್ ಬೈಕ್ ಚಲಾಯಿಸಿಕೊಂಡು ಹೋಗುತ್ತಿದ್ದರು. ಈ ವೇಳೆ ಬೈಕ್ ಸ್ಕಿಡ್ ಆಗಿ ರಸ್ತೆ ಬದಿಯ ಡಿವೈಡರ್ ಗೆ ಢಿಕ್ಕಿ ಹೊಡೆದ ಪರಿಣಾಮ ಅವರ ತಲೆಗೆ ಗಂಭೀರವಾಗಿ ಗಾಯವಾಗಿತ್ತು. ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ಮೃತಪಟ್ಟಿದ್ದಾರೆ.
READ
- ಮಿಯ್ಯಾರು- ಲವಕುಶ ಜೋಡುಕೆರೆ ಕಂಬಳ -ಶಾಸಕರುಗಳು ಅವಿರತ ಪ್ರಯತ್ನ ಕಂಬಳ ಅನುದಾನಕ್ಕೆ ಪೂರಕ : ಮಂಜುನಾಥ್ ಭಂಡಾರಿ (Video News)
- ಮಂಗಳೂರು: ಪೊಕ್ಸೊ ಪ್ರಕರಣದ ವಿಚಾರಣಾಧೀನ ಕೈದಿ ಜೈಲಿನಲ್ಲಿ ನೇಣುಬಿಗಿದು ಆತ್ಮಹತ್ಯೆಗೆ ಶರಣು
- ಮಂಗಳೂರು ಪೊಲೀಸರ ಭರ್ಜರಿ ಕಾರ್ಯಾಚರಣೆ: ರಾಜ್ಯ ಪೊಲೀಸ್ ಇತಿಹಾಸದಲ್ಲೆ ಗರಿಷ್ಠ ಪ್ರಮಾಣದಲ್ಲಿ 75 ಕೋಟಿ ಮೌಲ್ಯದ ಎಂಡಿಎಂಎ ವಶ ( Video News)
ಮೆಲ್ಕಾರ್ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಾಗಿದೆ.