-->
ಕ್ರೇನ್ ಹರಿದು ವಿದ್ಯಾರ್ಥಿನಿ ಬಲಿ

ಕ್ರೇನ್ ಹರಿದು ವಿದ್ಯಾರ್ಥಿನಿ ಬಲಿ

ಬೆಂಗಳೂರು: ಕ್ರೇನ್ ಹರಿದು ವಿದ್ಯಾರ್ಥಿನಿಯೋರ್ವಳು ಮೃತಪಟ್ಟಿರುವ ಘಟನೆ ವೈಟ್ ಫೀಲ್ಡ್ - ಹೊಸಕೋಟೆ ಮಾರ್ಗದ ಕನ್ನಮಂಗಲ ಗೇಟಿನ ಜೈನ್ ಹೆರಿಟೇಜ್ ಶಾಲೆ ಬಳಿ ಬುಧವಾರ ಮಧ್ಯಾಹ್ನ ನಡೆದಿದೆ. 

ವೈಟ್‌ಫೀಲ್ಡ್ ಬಳಿಯ ಕನ್ನಮಂಗಲ ನಿವಾಸಿ ನೂರ್ ಪೀಜಾ ( 19 ) ಮೃತಪಟ್ಟ ವಿದ್ಯಾರ್ಥಿನಿ.

ವಿದ್ಯಾರ್ಥಿನಿ ನೂರ್ ಪೀಜಾ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭ ಹಿಂಬದಿಯಿಂದ ಬಂದ ಕ್ರೇನ್ ಹರಿದು ದುರ್ಘಟನೆ ಸಂಭವಿಸಿದೆ. ಕ್ರೇನ್ ಚಾಲಕನ ಅಜಾಗರೂಕತೆಯಿಂದಲೇ ಈ ಅವಘಡ ಸಂಭವಿಸಿದೆ. ಈ ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅಪಘಾತದಿಂದ ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ. ಈ ಬಗ್ಗೆ ವೈಟ್ ಫೀಲ್ಡ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Ads on article

Advertise in articles 1

advertising articles 2

Advertise under the article