
ರಸ್ತೆ ಗುಂಡಿ ತಪ್ಪಿಸಲು ಹೋಗಿ ನಿವೃತ್ತ ಯೋಧ ಬಲಿ
Monday, November 14, 2022
ಮಂಡ್ಯ: ರಸ್ತೆ ಗುಂಡಿಯನ್ನು ತಪ್ಪಿಸಲು ಹೋಗಿ ಬೈಕ್ ನಿಂದ ರಸ್ತೆಗೆ ಬಿದ್ದ ನಿವೃತ್ತ ಯೋಧರೊಬ್ಬರ ಮೇಲೆಯೇ ಲಾರಿ ಹರಿದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಡ್ಯದ ಕಾರೆಮನೆ ಗೇಟ್ ಬಳಿ ನಡೆದಿದೆ. ಘಟನೆಯಲ್ಲಿ ಯೋಧನ ತಂದೆ ಗಾಯಗೊಂಡು ಆಸ್ಪತ್ರೆಯಲ್ಲಿಚಿಕಿತ್ಸೆ ಪಡೆಯುತ್ತಿದ್ದಾರೆ.
ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿರುವ ಸಾತನೂರು ನಿವಾಸಿ ಎಸ್.ಎನ್.ಕುಮಾರ್ (39) ಮೃತಪಟ್ಟವರು.
ಸೇನೆಯೆಂದ ನಿವೃತ್ತಿಗೊಂಡ ಬಳಿಕ ಅವರು ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗೆ ಆಯ್ಕೆಯಾಗಿದ್ದಾರು. ಆದ್ದರಿಂದ ಅವರು ಕಳೆ್ 6 ತಿಂಗಳಿಂದ ಬೆಂಗಳೂರಿನಲ್ಲಿ ತರಬೇತಿ ಪಡೆಯುತ್ತಿದ್ದರು. ರಜೆಯಲ್ಲಿ ತಮ್ಮ ಮನೆಗೆ ಬಂದಿದ್ದ ಅವರು ತಂದೆಯೊಂದಿಗೆ ಬೈಕ್‌ನಲ್ಲಿ ಮಂಡ್ಯದಿಂದ ಗ್ರಾಮಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ. ಈ ವೇಳೆ ರಸ್ತೆಯ ಗುಂಡಿಯನ್ನು ತಪ್ಪಿಸಲು ಹೋದ ಕುಮಾರ್ ಎಡಕ್ಕೆ ಬೈಕ್ ತಿರುಗಿಸಿದ್ದಾರೆ.
ಪರಿಣಾಮ ಮುಂಭಾಗದಿಂದ ಬರುತ್ತಿದ್ದ ಬೈಕ್‌ಗೆ ಢಿಕ್ಕಿಯಾಗಿ ಅವರು ಕೆಳಕ್ಕೆ ಬಿದ್ದಿದ್ದಾರೆ. ಅದೇ ವೇಳೆ ಹಿಂದಿನಿಂದ ಬರುತ್ತಿದ್ದ ಲಾರಿ ಎಸ್.ಎನ್.ಕುಮಾರ್ ತಲೆಯ ಮೇಲೆ ಹರಿದಿದೆ. ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಬಗ್ಗೆ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.