-->
ಮನೆಕೆಲಸದಾಕೆಯೊಂದಿಗೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದ ವೇಳೆ ಹೃದಯಾಘಾತದಿಂದ ವೃದ್ಧ ಸಾವು

ಮನೆಕೆಲಸದಾಕೆಯೊಂದಿಗೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದ ವೇಳೆ ಹೃದಯಾಘಾತದಿಂದ ವೃದ್ಧ ಸಾವು

ಬೆಂಗಳೂರು: ಪುಟ್ಟೇನಹಳ್ಳಿ ವೃದ್ಧರೊಬ್ಬರ ಮೃತದೇಹ ಬ್ಯಾಗ್‍ನಲ್ಲಿ ಪತ್ತೆ ಪ್ರಕರಣಕ್ಕೆ ರೋಚಕ ತಿರುವು ದೊರಕಿದೆ. ಈ ವೃದ್ಧ ಮನೆ ಕೆಲಸದಾಕೆಯೊಂದಿಗೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದ ಹೃದಯಾಘಾತವಾಗಿ ಸಾವನ್ನಪ್ಪಿರುವ ಸತ್ಯ ತನಿಖೆ ವೇಳೆ ಬಯಲಾಗಿದೆ.

ನ.16ರಂದು ಮೊಮ್ಮಗನನ್ನು ಬ್ಯಾಡ್ಮಿಂಟನ್ ಕ್ಲಾಸ್‍ಗೆ ಕರೆದುಕೊಂಡು ಹೋಗಿದ್ದ ವೃದ್ಧ ಬಾಲಸುಬ್ರಮಣಿಯನ್ (67) ಸಂಜೆ 4:55ರ ವೇಳೆಗೆ ಸೊಸೆಗೆ ಕರೆ ಮಾಡಿ ಹೊರಗಡೆ ಕೆಲಸ ಇದೆ ಎಂದು ತಿಳಿಸಿದ್ದರು. ಬಳಿಕ ಕರೆ ಮಾಡಿದಾಗ ಅವರ ಫೋನ್ ಸ್ವಿಚ್ ಆಫ್ ಆಗಿತ್ತು. ಆ ಬಳಿಕವೂ ಅವರು ಮನೆಗೆ ಬಾರದಿದ್ದಾಗ ಅವರ ಪುತ್ರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದರು. ಆದರೆ ಈ ಬಗ್ಗೆ ತನಿಖೆ ಆರಂಭಿಸಿದ ಪೊಲೀಸರಿಗೆ ಶಾಕ್ ಕಾದಿತ್ತು. 

ನ.18 ರಂದು ಪುಟ್ಟೇನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಚೀಲ ಮತ್ತು ಬೆಡ್‍ಶೀಟ್‍ನಲ್ಲಿ ಸುತ್ತಿದ್ದ ಮೃತದೇಹವೊಂದು ಜೆಪಿ ನಗರದ 6ನೇ ಹಂತದ ಸಮೀಪ ಪತ್ತೆಯಾಗಿತ್ತು. ಈ ಮೃತದೇಹ ಬಾಲಸುಬ್ರಮಣಿಯನ್ ಎಂದು ಗುರುತು ಪತ್ತೆಯಾದ ಬಳಿಕ ಈ ಸಾವಿನ ಬಗ್ಗೆ ಅನುಮಾನ ಮೂಡಿದೆ. ಅವರ ಮೃತದೇಹದ ಮೇಲೆ ಯಾವುದೇ ಗಾಯಗಳು ಕಂಡು ಬಂದಿರಲಿಲ್ಲ. ಆದರೆ ಸಿಡಿಆರ್ ಪರಿಶೀಲಿಸಿದಾಗ ಶಾಕಿಂಗ್ ವಿಚಾರ ಬೆಳಕಿಗೆ ಬಂದಿತ್ತು. ಬಾಲಸುಬ್ರಮಣಿಯನ್ ಕಾಲ್ ಹಿಸ್ಟರಿ ಜಾಲಾಡಿದಾಗ ನಿರಂತರವಾಗಿ ಮಹಿಳೆಯೊಬ್ಬರ ಜೊತೆಗೆ ಸಂಪರ್ಕ ಇರುವುದು ಬಯಲಾಗಿತ್ತು. ಸಾರಕ್ಕಿ ಸಿಗ್ನಲ್ ಬಳಿ ಲಾಸ್ಟ್ ಲೊಕೇಶನ್ ದಾಖಲಾಗಿತ್ತು.

ಆದ್ದರಿಂದ ಆ ಮಹಿಳೆ ಯಾರು ಅನ್ನೋದರ ಕುರಿತು ಖಾಕಿ ಬೆನ್ನು ಬಿದ್ದಿತ್ತು. ತನಿಖೆ ವೇಳೆ ಬಾಲಸುಬ್ರಮಣಿಯನ್ ಮನೆಗೆ ಬರುತ್ತಿದ್ದ ಮನೆ ಕೆಲಸದಾಕೆ ಮೇಲೆ ಅನುಮಾನ ಮೂಡಿತ್ತು. ನಂತರ ಮನೆ ಕೆಲಸದಾಕೆಯನ್ನು ವಿಚಾರಿಸಿದಾಗ ಸಾವಿನ ಸತ್ಯ ಹೊರಬಿದ್ದಿದೆ. 

ನ.16 ರಂದು ಮೊಮ್ಮಗನನ್ನು ಬ್ಯಾಡ್ಮಿಂಟನ್ ಕ್ಲಾಸ್‍ಗೆ ಕರೆದುಕೊಂಡು ಹೋಗಿದ್ದ ಬಾಲಸುಬ್ರಮಣಿಯನ್, ಅಲ್ಲಿಂದ ಮನೆ ಕೆಲಸದಾಕೆ ಮನೆಗೆ ಹೋಗಿದ್ದಾರೆ. ಅಲ್ಲಿ ಕೆಲಸದಾಕೆಯೊಂದಿಗೆ ಲೈಂಗಿಕ ಕ್ರಿಯೆ ನಡೆಸುತ್ತಿದ್ದ ವೇಳೆ ಅವರಿಗೆ ಹೃದಯಾಘಾತವಾಗಿದೆ. ಬಾಲಸುಬ್ರಮಣಿಯನ್ ಹೃದಯಾಘಾತದಿಂದ ಮೃತಪಟ್ಟಿದ್ದರಿಂದ ಮನೆಕೆಲಸದಾಕೆ ತನ್ನ ಪತಿಗೆ ಮಾಹಿತಿ ನೀಡಿದ್ದಾಳೆ. ಬಳಿಕ ಮನೆಗೆ ಬಂದ ಪತಿ ಮತ್ತು ಸಹೋದರ ಸೇರಿ ಸುಬ್ರಮಣಿಯನ್ ಮೃತದೇಹವನ್ನು ಪ್ಲಾಸ್ಟಿಕ್‌ ಬ್ಯಾಗ್‍ನಲ್ಲಿ ಕಟ್ಟಿ ರಸ್ತೆಯಲ್ಲಿ ಬಿಸಾಡಿದ್ದರು. 

ಈ ಬಗ್ಗೆ ಪೊಲೀಸ್ ವಿಚಾರಣೆ ವೇಳೆ ಮನೆ ಕೆಲಸದಾಕೆ ತಪ್ಪೊಪ್ಪಿಕೊಂಡಿದ್ದಾರೆ. ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದಾಗ ಅವರು ಮೃತಪಟ್ಟಿದ್ದಾರೆ. ನಮ್ಮನ್ನು ಕೊಲೆ ಪ್ರಕರಣದಲ್ಲಿ ಪೊಲೀಸರು ಬಂಧಿಸುತ್ತಾರೆಂದು ಹೀಗೆ ಮಾಡಿದ್ದೇವೆ ಎಂದು ಹೇಳಿಕೆ ನೀಡಿದ್ದಾಳೆ.

Ads on article

Advertise in articles 1

advertising articles 2

Advertise under the article