kadaba - ಆಟೋ ರಿಕ್ಷಾ ಹಾಗೂ ಪಿಕಪ್ ನಡುವೆ ಢಿಕ್ಕಿ..4ವರ್ಷದ ಮಗು ಸಾವು..
Thursday, November 10, 2022
ಕಡಬ
ಆಟೋ ರಿಕ್ಷಾ ಹಾಗೂ ಪಿಕಪ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಪುಟ್ಟ ಬಾಲಕನೋರ್ವ ಮೃತಪಟ್ಟ ಘಟನೆ ಕಡಬ - ಪಂಜ ರಸ್ತೆಯ ಕೋಡಿಂಬಾಳ ಎಂಬಲ್ಲಿ ಗುರುವಾರ ಸಂಜೆ ನಡೆದಿದೆ.
ಕಡಬದಿಂದ ಪಂಜ ಕಡೆಗೆ ತೆರಳುತ್ತಿದ್ದ ರಿಕ್ಷಾ ಹಾಗೂ ಪಿಕಪ್ ನಡುವೆ ಕೋಡಿಂಬಾಳ ಸಮೀಪದ ಮುರಚೆಡವು ಎಂಬಲ್ಲಿ ಢಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಪಂಜ ನಿವಾಸಿ ನವೀನ್ ಎಂಬವರ ಪುತ್ರ ಹಾರ್ದಿಕ್ (4) ಗಂಭೀರ ಗಾಯಗೊಂಡಿದ್ದು, ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ 108 ಆಂಬ್ಯುಲೆನ್ಸ್ ಮೂಲಕ ಪುತ್ತೂರು ಆಸ್ಪತ್ರೆಗೆ ಕರೆದೊಯ್ಯುವ ಹಾದಿ ಮಧ್ಯೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಪಿಕಪ್ ಅತೀ ವೇಗ ಮತ್ತು ಆಟೋ ಚಾಲಕನ ದೃಷ್ಟಿ ಹೀನತೆ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.