ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷರಾಗಿ ಮಾಲಾಡಿ ಅಜಿತ್ ಕುಮಾರ್ ರೈ ಕೊಡಿಯಾಲ್ ಗುತ್ತು ಪುನರಾಯ್ಕೆ
Monday, November 7, 2022
ಮಂಗಳೂರು: ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಹಾಗೂ ಜಗತ್ತಿನಾಧ್ಯಂತ ಸದಸ್ಯರನ್ನೊಳಗೊಂಡ ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷರಾಗಿ 2022-2025 ರ ಸಾಲಿಗೆ ಅವಿರೋಧವಾಗಿ ಆಯ್ಕೆಗೊಂಡಿರುತ್ತಾರೆ.
ಅಜಿತ್ ಕುಮಾರ್ ರೈ ಬಂಟರ ಮಾತೃ ಸಂಘಕ್ಕೆ ಸತತವಾಗಿ ನಾಲ್ಕನೇ ಬಾರಿಗೆ ಅಧ್ಯಕ್ಷರಾಗಿ ಪುನರಾಯ್ಕೆಗೊಂಡಿರುತ್ತಾರೆ.
ಮುಂದಿನ ದಿನಗಳಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘದ ಮಹತ್ವಾಕಾಂಕ್ಷೆ ಯೋಜನೆಯಾದ ಶತಮಾನೋತ್ಸವ ಕಟ್ಟಡ ಸಂಕೀರ್ಣ, ವಿಶ್ವವ್ಯಾಪಿ ಸಮಾಜ ಭಾಂಧವರನ್ನು ಒಂದೇ ಸೂರಿನಡಿ ತರ ಬಯಸುವ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯನ್ನು ಕೈ ಗೊಳ್ಳುವುದು ಹಾಗೂ ಸಮಾಜದ ಸವೋತೊಮುಖ ಅಭಿವೃದ್ದಿಗಾಗಿ ಶ್ರಮಿಸುವುದಾಗಿ ಮಾಲಾಡಿ ಅಜಿತ್ ಕುಮಾರ್ ರೈ ನುಡಿದರು.
ಮುಖ್ಯ ಚುನಾವಣಾಧಿಕಾರಿ ವಕೀಲರಾದ ಬಿ ಗುರುಪ್ರಸಾದ್ ಶೆಟ್ಟಿ ಅವರು ಅಧ್ಯಕ್ಷರ ಅವಿರೋಧ ಆಯ್ಕೆಯನ್ನು ಘೋಷಿಸಿದರು. ಉಪ ಚುನಾವಣಾಧಿಕಾರಿ ವಕೀಲರಾದ ಬಿಪಿನ್ ರೈ, ಹಾಗೂ ಚುನಾವಣಾಧಿಕಾರಿ ದಿವಾಕರ ಸಾಮಾನಿ ಚೇಳಾರ್ ಗುತ್ತು ಉಪಸ್ಥಿತರಿದ್ದರು.