-->
ಇಂದು ಚಂದ್ರಗ್ರಹಣ- ದೇವಸ್ಥಾನ ದಲ್ಲಿ ದರ್ಶನ ಇದೆಯ? ಸೂತಕದ ಸಮಯ ಯಾವುದು? - ಇಲ್ಲಿದೆ ಮಾಹಿತಿ

ಇಂದು ಚಂದ್ರಗ್ರಹಣ- ದೇವಸ್ಥಾನ ದಲ್ಲಿ ದರ್ಶನ ಇದೆಯ? ಸೂತಕದ ಸಮಯ ಯಾವುದು? - ಇಲ್ಲಿದೆ ಮಾಹಿತಿ


ʻಸಂಪೂರ್ಣ ಚಂದ್ರಗ್ರಹಣ ಇಂದು ಸಂಭವಿಸಲಿದ್ದು, ರಾಜ್ಯದ ಹಲವು ದೇವಸ್ಥಾನಗಳು ನಾಳೆ ಬಂದ್ ಆಗಲಿವೆ.

 ಧರ್ಮಸ್ಥಳದಲ್ಲೂ ದೇವರ ದರ್ಶನ ಸಮಯದಲ್ಲಿ ಬದಲಾವಣೆ ಆಗಲಿದೆ. ಮಧ್ಯಾಹ್ನ 1:30ರಿಂದ ರಾತ್ರಿ 7ರತನಕ ದೇವರ ದರ್ಶನಕ್ಕೆ ಅವಕಾಶ ಇರುವುದಿಲ್ಲ. ಮಧ್ಯಾಹ್ನ 1:30ರ ವರೆಗೆ ಮಾತ್ರ ಭೋಜನ ವ್ಯವಸ್ಥೆ ಇರಲಿದೆ. ಬಳಿಕ ರಾತ್ರಿ 7 ಗಂಟೆಯ ನಂತರ ಭೋಜನ ವ್ಯವಸ್ಥೆ ಮುಂದುವರಿಯಲಿದೆ.

ಕಟೀಲು ದೇವಸ್ಥಾನದಲ್ಲೂ ಗ್ರಹಣದ ದಿನ ದೇವರ ಪೂಜೆಯ ಸಮಯ ಬದಲಾವಣೆ ಆಗಲಿದೆ. ನಾಳೆ ಬೆಳಗ್ಗೆ 9:30ಕ್ಕೆ ದೇವರಿಗೆ ಪೂಜೆ ನಡೆಯುತ್ತದೆ. ಮಧ್ಯಾಹ್ನ ಭೋಜನ ಇರುವುದಿಲ್ಲ.

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಬೆಳಗ್ಗೆ 9 ರಿಂದ 11:30ರವರೆಗೆ ಭಕ್ತರಿಗೆ ದೇವರ ದರ್ಶನ ಅವಕಾಶವನ್ನು ಕಲ್ಪಿಸಲಾಗಿದೆ. ಗ್ರಹಣ ಸ್ಪರ್ಶ ಸಮಯವಾದ 2:39ರಿಂದ ಗ್ರಹಣ ಮೋಕ್ಷ ಸಮಯ 6:19ರತನಕ ಮತ್ತು ರಾತ್ರಿ 7:30 ರಿಂದ 9 ರತನಕ ದೇವರ ದರ್ಶನಕ್ಕೆ ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ.


ಸೂತಕ ಸಮಯ

 ಗ್ರಹಣದ ಸಮಯದಲ್ಲಿ ಮನೆಯೊಳಗೆ ಇರಲು ಮತ್ತು ಯಾವುದೇ ಹೊಸ ಕೆಲಸವನ್ನು ಮಾಡುವುದನ್ನು ತಪ್ಪಿಸಲು ಸಾಮಾನ್ಯವಾಗಿ ಸಲಹೆ ನೀಡಲಾಗುತ್ತದೆ. ದೃಕ್ ಪಂಚಾಂಗದ ಪ್ರಕಾರ, ಚಂದ್ರ ಗ್ರಹಣ ಸೂತಕವು ಬೆಳಿಗ್ಗೆ 9:21 ಕ್ಕೆ ಪ್ರಾರಂಭವಾಗುತ್ತದೆ ಮತ್ತು ಸಂಜೆ 6:18 ಕ್ಕೆ ಕೊನೆಗೊಳ್ಳುತ್ತದೆ.

Ads on article

Advertise in articles 1

advertising articles 2

Advertise under the article