ಸುಳ್ಯ: ಗೋಣಿಚೀಲದಲ್ಲಿ ಮಹಿಳೆಯ ಮೃತದೇಹ ಪತ್ತೆ; ಪತಿಯೇ ಹತ್ಯೆಗೈದು ಪರಾರಿಯಾಗಿರುವ ಶಂಕೆ
Tuesday, November 22, 2022
ಸುಳ್ಯ: ಇಲ್ಲಿನ ಬಾಡಿಗೆ ಮನೆಯೊಂದರಲ್ಲಿ ಮಹಿಳೆಯೋರ್ವರ ಮೃತದೇಹವು ಗೋಣಿಚೀಲದಲ್ಲಿ ತುಂಬಿಸಿಟ್ಟ ರೀತಿಯಲ್ಲಿ ಪತ್ತೆಯಾಗಿರುವ ಘಟನೆ ಸುಳ್ಯದ ಬೀರಮಂಗಲ ಎಂಬಲ್ಲಿ ನಡೆದಿದೆ. ಮಹಿಳೆಯ ಪತಿಯೇ ಹತ್ಯೆಗೈದು ಪರಾರಿಯಾಗಿದ್ದಾನೆಂಬ ಬಗ್ಗೆ ಶಂಕೆ ವ್ಯಕ್ತವಾಗಿದೆ.
ಸುಳ್ಯದ ಹೊಟೇಲೊಂದರಲ್ಲಿ ಕೆಲಸ ಮಾಡುತ್ತಿದ್ದ ಇಮ್ರಾನ್ ಎಂಬಾತ ಕೃತ್ಯ ಎಸಗಿದ್ದಾನೆಂದು ಶಂಕಿಸಲಾಗಿದೆ.
ಇಮ್ರಾನ್ ಕಳೆದ ಆರು ತಿಂಗಳಿನಿಂದ ಬೀರಮಂಗಲ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ. ಕಳೆದ ಎರಡು ದಿನಗಳ ಹಿಂದೆ ಊರಿಗೆ ತೆರಳುತ್ತೇನೆಂದು ತಿಳಿಸಿ ತೆರಳಿದ್ದ ಎನ್ನಲಾಗಿದೆ. ಆದರೆ ಹೋಗುವಾಗ ಆತ ತನ್ನ ಪತ್ನಿಯನ್ನು ಜೊತೆಗೆ ಕರೆದೊಯ್ದಿರಲಿಲ್ಲ ಎನ್ನಲಾಗಿದ್ದು, ಈ ಬಗ್ಗೆ ಸ್ಥಳೀಯರು ಸಂಶಯ ವ್ಯಕ್ತಪಡಿಸಿದ್ದರು.
ಪೋಲಿಸರಿಗೆ ವಿಷಯ ತಿಳಿಸಿ ಪೊಲೀಸರು ಸಂಜೆ ಬಾಡಿಗೆ ಮನೆಗೆ ಬಂದು ಬಾಗಿಲು ಒಡೆದು ಪರಿಶೀಲಿಸಿದ ವೇಳೆ ಮನೆಯೊಳಗೆ ಗೋಣಿ ಚೀಲದಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಸುಳ್ಯ ಪೋಲಿಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.