ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಮತ್ತೆ ಮೂವರನ್ನು ಬಂಧಿಸಿದ ಎನ್ಐಎ
Saturday, November 5, 2022
ಬೆಳ್ಳಾರೆ: ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಅಧಿಕಾರಿಗಳ ತಂಡ ಬೆಳ್ಳಂಬೆಳಗ್ಗೆ ದಾಳಿ ನಡೆಸಿ ಮತ್ತೆ ಮೂವರನ್ನು ಬಂಧಿಸಿದೆ.
ಶನಿವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿರುವ ಎನ್ಐಎ ಅಧಿಕಾರಿಗಳ ತಂಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಇಬ್ರಾಹಿಂ ಶಾ, ಶಾಫಿ ಬೆಳ್ಳಾರೆ ಹಾಗೂ ಇಕ್ಬಾಲ್ ಬೆಳ್ಳಾರೆಯನ್ನು ಬಂಧಿಸಿದೆ.
ಶಾಫಿ ಬೆಳ್ಳಾರೆ ಎಸ್ ಡಿಪಿಐ ರಾಜ್ಯ ಕಾರ್ಯದರ್ಶಿಯಾಗಿದ್ದರೆ, ಇಕ್ಬಾಲ್ ಬೆಳ್ಳಾರೆ ಗ್ರಾಪಂ ಸದಸ್ಯರಾಗಿದ್ದಾರೆ. ಇವರೊಂದಿಗೆ ಸುಳ್ಯದ ಇಬ್ರಾಹಿಂ ಸೇರಿ ಶನಿವಾರ ಮುಂಜಾನೆ ಈ ಮೂವರನ್ನು ಅವರ ಮನೆಯಲ್ಲೇ ಎನ್ಐಎ ವಶಕ್ಕೆ ಪಡೆದುಕೊಂಡಿದೆ. ಬುಧವಾರ ಮುಂಜಾನೆ ಜಿಲ್ಲೆಯ ಹಲವು ಕಡೆ ಪಿಎಫ್ ಐ ಮುಖಂಡರ ಮನೆ ಮೇಲೆ ದಾಳಿ ನಡೆಸಿರುವ ಎನ್ಐಎ ಅಧಿಕಾರಿಗಳ ತಂಡ ದಾಖಲೆಗಳನ್ನು ಪರಿಶೀಲನೆ ನಡೆಸಿತ್ತು.