Subrahmanya-ಕುಕ್ಕೆ ಚಂಪಾಷಷ್ಠಿ ಮಹೋತ್ಸವ.ಮುಖ್ಯಮಂತ್ರಿಗಳಿಗೆ ಆಹ್ವಾನ..
Friday, November 18, 2022
ಸುಬ್ರಹ್ಮಣ್ಯ
ಮಹಾತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾಷಷ್ಟಿ ಮಹೋತ್ಸವಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಆಮಂತ್ರಣ ನೀಡಿ ಅಹ್ವಾನಿಸಲಾಯಿತು.
ಗುರುವಾರ ಮುಖ್ಯಮಂತ್ರಿ ಅವರನ್ನು ಬೆಂಗಳೂರಿನಲ್ಲಿ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ ಅವರ ನೇತೃತ್ವದಲ್ಲಿ ಭೇಟಿ ಮಾಡಿದ ದೇವಳದ ಆಡಳಿತ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾಷಷ್ಠಿ ಮಹೋತ್ಸವ ಆಮಂತ್ರಣ ನೀಡಿ ಆಮಂತ್ರಿಸಿದರು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಂ ಸುಳ್ಳಿ, ಸದಸ್ಯರಾದ ಪ್ರಸನ್ನ ದರ್ಬೆ, ಮನೋಹರ ರೈ, ಮಾಸ್ಟರ್ ಪ್ಲಾನ್ ಸದಸ್ಯರಾದ ಕಿಶೋರ್ ಕುಮಾರ್ ಕೂಜುಗೋಡು, ಚಂದ್ರಶೇಖರ ನಲ್ಲೂರಾಯ, ಮನೋಜ್ ಸುಬ್ರಹ್ಮಣ್ಯ, ದೇವಳದ ಕಾರ್ಯನಿರ್ವಹಣಾಧಿಕಾರಿ ಡಾ.ನಿಂಗಯ್ಯ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.