ಕೌಟುಂಬಿಕ ಕಲಹದಿಂದ ಬೇಸತ್ತು ಮೂರು ವರ್ಷದ ಮಗುವಿನೊಂದಿಗೆ ನಾಲೆಗೆ ಹಾರಿ ಆತ್ಮಹತ್ಯೆಗೈದ ಯುವತಿ
Monday, November 21, 2022
ಚೆನ್ನರಾಯಪಟ್ಟಣ: ಕೌಟುಂಬಿಕ ಕಲಹದಿಂದ ಬೇಸತ್ತು ಮೂರು ವರ್ಷದ ಮಗುವಿನೊಂದಿಗೆ ನಾಲೆಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿರುವ ಹೃದಯ ವಿದ್ರಾವಕ ಘಟನೆ ಚೆನ್ನರಾಯಪಟ್ಟಣದ ದೊಡ್ಡಕುಂಚೇವು ಗ್ರಾಮದಲ್ಲಿ ನಡೆದಿದೆ.
ದೊಡ್ಡಕುಂಚೇವು ಗ್ರಾಮದ ನಿವಾಸಿ ಭವ್ಯಾ(23) ಆಕೆಯ ಮೂರು ವರ್ಷದ ಮಗು ವೇದಾಂತ್(3) ಮೃತಪಟ್ಟ ದುರ್ದೈವಿಗಳು.
ಭವ್ಯಾ ಮೂರು ವರ್ಷಗಳ ಹಿಂದೆ ಶ್ರೀನಿವಾಸ್ ಎಂಬಾತನನ್ನು ಮದುವೆಯಾಗಿದ್ದರು. ಆದರೆ ಕೌಟುಂಬಿಕ ಕಲಹದಿಂದ ಬೇಸತ್ತು ಆಕೆ ತನ್ನ ಮೂರು ವರ್ಷದ ಮಗುವಿನೊಂದಿಗೆ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಗುವಿನ ಮೃತದೇಹ ಗೆಜ್ಜಗಾರನ ಹಳ್ಳಿಯಲ್ಲಿ ಪತ್ತೆಯಾಗಿದೆ. ತಾಯಿಗಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ಹುಡುಕಾಟ ನಡೆಸುತ್ತಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಹೊಳೆನರಸೀಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.